ಗ್ಯಾರಂಟಿಗಳ ಅನುಷ್ಠಾನಕ್ಕೆ ದಲಿತರ ಅನುದಾನ ಬಳಕೆ

IMG20230814112820 copy
Published on


ಯಾದಗಿರಿ: ರಾಜ್ಯ ಸರಕಾರ ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ದಲಿತರ ಕಲ್ಯಾಣಕ್ಕಾಗಿ ಮೀಸಲಿರುವ ಅನುದಾನವನ್ನು ಬಳಸಿಕೊಳ್ಳುವ ಮೂಲಕ ಶೋಷಿತ ವರ್ಗಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಮೇಲ್ಮನೆ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.


ಸಚಿವರಾದ ಡಾ.ಎಚ್ಸಿ ಮಹಾದೇವಪ್ಪ ಹಾಗೂ ಪ್ರಿಯಾಂಕ್ ಖಗರ್ೆ ಇಬ್ಬರು ದಲಿತ ವರ್ಗಕ್ಕೆ ಸೇರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪಕ್ಕಕ್ಕೆ ಕೂಡಿಸಿಕೊಂಡೇ ದಲಿತರ ಕಲ್ಯಾಣಕ್ಕಾಗಿ ಮೀಸಿರಿಸುವ ನಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಭರವಸೆ ನೀಡಿರುವ ಭಾಗ್ಯಗಳನ್ನು ಅನುಷ್ಠಾನಗೊಳಿಸಲು ಈ ಸರಕಾರ ಹೆಣಗಾಡುತ್ತಿದೆ. ಎಲ್ಲಕ್ಕೂ ಹೆಚ್ಚಾಗಿ ದಲಿತರಿಗೆ ಮೀಸಲಾಗಿರಿಸಬೇಕಾಗಿದ್ದ 11 ಸಾವಿರ ಕೋಟಿ ರೂ.ಗಳನ್ನು ಭಾಗ್ಯಗಳಿಗೆ ಬಳಕೆ ಮಾಡಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದರಾಮಯ್ಯನವರ ಈ ಮೋಸಕ್ಕೆ ದಲಿತ ಮಂತ್ರಿಗಳೇ ಸಾಥ್ ನೀಡಿರುವುದು ನಿಜಕ್ಕೂ ದುರಂತದ ಸಂಗತಿ. ಅಲ್ಲದೇ ಈ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾಜರ್ುನ ಖಗರ್ೆ ಸಹ ದಲಿತರಿಗೆ ಮೀಸಲಿಟ್ಟ ಅನುದಾನ ಸಿಗದ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ಕಿಡಿ ಕಾರಿದರು.

ಇಂದು ಸಕರ್ಾರ ಕೇವಲ ಗ್ಯಾರಂಟಿಗಳನ್ನು ಜಾರಿಗೊಳಿಸಲು ರಾಜ್ಯದ ಅಭಿವೃದ್ಧಿಯನ್ನೇ ಕಡೆಗಣಿಸಿದೆ. ಸರಕಾರ ಎಂದರೆ ಕೇವಲ 5 ಗ್ಯಾರಂಟಿ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಹೊರಟಂತೆ ಕಾಣುತ್ತಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ನವರು ಅಂಗನವಾಡಿ ನೌಕರರ ವೇತನ 15 ಸಾವಿರ ರೂ.ಮಾಡುತ್ತೇವೆ. ಗ್ಯಾಸ್ ಸಿಲಿಂಡರ್ ಬೆಲೆ ಕಡಿಮೆ ಮಾಡಲಾಗುವುದು ಎಂಬ ಹೇಳಿಕೆ ನೀಡಿದ್ದರು. ಆದರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಒಂದು ವರ್ಷದವರೆಗೆ ಅಭಿವೃದ್ಧಿ ಕೇಳಬೇಡಿ ಎಂದು ಹೇಳಿಕೆ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.

ಬಿಜೆಪಿ ಜಿಲ್ಲಾದ್ಯಕ್ಷ ಡಾ.ಶರಣಭೂಪಾಲರೆಡ್ಡಿ ನಾಯ್ಕಲ್, ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದಶರ್ಿ ದೇವೇಂದ್ರನಾಥ ನಾದ್, ಗುರುಕಾಮಾ, ಪ್ರಮುಖರಾದ ಪರುಶುರಾಮ ಕುರಕುಂದಿ, ಖಂಡಪ್ಪ ದಾಸನ, ಜಿಲ್ಲಾ ಮಾಧ್ಯಮ ಸಂಚಾಲಕ ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net