ಗ್ಯಾರಂಟಿಗಳಿಂದ ರೈತರಿಗೂ ಅನುಕೂಲ

CTD 24 RITA CONGRES--09
Published on

ಚಿತ್ರದುರ್ಗ: ರೈತರ ಋಣ ತೀರಿಸಲು ಲೋಕಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಮಾಜಿ ಸಚಿವ ಎಚ್.ಆಂಜನೇಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿದರು. ಪಕ್ಷದ ಕಿಸಾನ್‌ಸೆಲ್‌ನಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ರಾ ಷ್ಟ್ರೀಯ ರೈತ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರೈತರ ಬದುಕಿಗೆ ಭದ್ರತೆ ಕೊಡುವುದು ಕಾಂಗ್ರೆಸ್ ವಿನಾ ಕೋಮುವಾದಿ ಪಕ್ಷ ಬಿಜೆಪಿ ಅಲ್ಲ. ಡಾ.ಮನಮೋಹನ್‌ಸಿಂಗ್ ಪ್ರಧಾನಿಯಾಗಿದ್ದಾಗ ರೈತರ 73 ಸಾವಿರ ಕೋಟಿ ರೂ.ಸಾಲ ಮನ್ನಾ ಮಾಡಿದ್ದಾರೆ. ಗ್ಯಾ ರಂಟಿಗಳಿಂದ ರೈತರಿಗೂ ಅನುಕೂಲವಾಗಿದೆ ಎಂದು ಹೇಳಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮಾತನಾಡಿ, ಸಭೆ, ಸಮಾರಂಭಗಳಲ್ಲಿ ರೈತ ಗೀತೆ ಗಾಯನ ಜಾರಿಗೊಳಿಸಿದ್ದು ಕಾಂಗ್ರೆಸ್. ಕೇಂದ್ರದ ಕರಾಳ ಮಸೂದೆಗಳನ್ನು ವಿರೋಧಿಸಿ ಹೊಸದಿಲ್ಲಿಯಲ್ಲಿ ಲಕ್ಷಾಂತರ ರೈತರು ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ 800 ರೈತರು ಅಸು ನೀಗಿ ದ್ದರೂ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಭಟನಾನಿರತರ ಧಾವಿಸಿ ಸಮಸ್ಯೆಗಳನ್ನು ಆಲಿಸಲಿಲ್ಲ. ಅಭ್ಯರ್ಥಿ ಯಾರೇ ಆಗಲಿ, ಚಿತ್ರ ದುರ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದರು.
ಕಿಸಾನ್‌ಸೆಲ್ ವಿಭಾಗದ ಜಿಲ್ಲಾ ಉಪಾಧ್ಯಕ್ಷ ಶಿವಲಿಂಗಪ್ಪ,ಡಿಸಿಸಿ ಅಧ್ಯಕ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್‌ಪೀರ್ ಮಾತನಾಡಿದ ರು. ಕಿಸಾನ್‌ಸೆಲ್ ವಿಭಾಗದ ಅಧ್ಯಕ್ಷ ನಾಗರಾಜ್,ಜಿಪಂ ಮಾಜಿ ಸದಸ್ಯ ಆರ್.ನರಸಿಂಹರಾಜ,ನಜ್ಮತಾಜ್, ಡಿ.ಎನ್.ಮೈಲಾರಪ್ಪ, ಮು ನಿರಾ ಎ.ಮಕಾಂದಾರ್,ಮುದಸಿರ್, ವೆಂಕಟಶಿವರೆಡ್ಡಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net