ಗ್ಯಾರಂಟಿಗಳಿಗೆ ಪರಿಶಿಷ್ಟರ ಅನುದಾನ ಬಳಕೆ ವಿರೋಧಿಸಿ ಧರಣಿ

20
Published on

ಮೈಸೂರು: ಪರಿಶಿಷ್ಟ ಜಾತಿ, ಪಂಗಡದ ಏಳಿಗೆಗಾಗಿ ಮೀಸಲಿಟ್ಟ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸುವುದು ಬೇಡ ಎಂದು ಆಗ್ರಹಿಸಿ ಅಖಿಲ ಭಾರತ ದಲಿತರ ಹಕ್ಕುಗಳ ಆಂದೋಲನ ಸಮಿತಿ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಮಲೆ ಮಹದೇಶ್ವರ ರಸ್ತೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಗಾಗಿ ಮೀಸಲಿಟ್ಟಿರುವ 11,000 ಕೋಟಿ ರೂ.ಅನುದಾನವನ್ನು ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲು ತೀರ್ಮಾನಿಸಿರುವುದು ಖಂಡನೀಯ. ಕೂಡಲೇ ಈ ನಿರ್ಧಾರ ಕೈ ಬಿಡಬೇಕೆಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಮಿತಿ ಮುಖಂಡರಾದ ಸೋಮರಾಜರಾಜೇ ಅರಸ್, ಜೆ.ಶಿವಣ್ಣ, ಮಹದೇವು, ನಂಜನಾಯಕ, ರಾಜು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net