ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದವನ ಬಂಧನ

arrested
Published on

ಮೈಸೂರು: ಕಾನೂನುಬಾಹಿರವಾಗಿ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ 119 ಸಿಲಿಂಡರ್, 2 ಅಪೆ ಆಟೋಗಳು, 2 ದ್ವಿಚಕ್ರ ವಾಹನ, ಇತರ ಪರಿಕರಗಳನ್ನು ಜಪ್ತಿ ಮಾಡಿದ್ದಾರೆ.

ರಾಜರಾಜೇಶ್ವರಿ ನಗರದ 2ನೇ ಹಂತದ ಬೆಮೆಲ್ ಲೇಔಟ್‌ನ ತೋಟದಲ್ಲಿ ಅಕ್ರಮವಾಗಿ ವಿವಿಧ ಕಂಪನಿಗಳ ಗ್ಯಾಸ್ ದಾಸ್ತಾನು ಮಾಡಿಕೊಂಡು ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿತ್ತು.

ಈ ಕುರಿತು ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ದಾಳಿ ಮಾಡಿದ್ದಾರೆ.

ಯಾವುದೇ ಅಧಿಕೃತ ರಹದಾರಿ ಅಥವಾ ಖರೀದಿ ಮಾಡಿದ ಬಿಲ್ ಇಲ್ಲದೆ ಅಕ್ರಮವಾಗಿ ಗ್ಯಾಸ್ ದಾಸ್ತಾನು ಮಾಡಿರುವುದು ಪತ್ತೆಯಾಗಿದ್ದು, ರೀಫಿಲ್ಲಿಂಗ್ ಮಾಡುತ್ತಿದ್ದವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸರಸ್ವತಿಪುರಂ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net