ಗ್ರಾಪಂ ಆಡಳಿತ ಚುಕ್ಕಾಣೆಯಲ್ಲಿ ಕೈ ಮೇಲುಗೈ

Gramm administration has an upper hand at the helm
ದೇವರಹಿಪ್ಪರಗಿ ಪಂಚಾಚಾರ್ಯ ಕಲ್ಯಾಣಮಂಟಪದಲ್ಲಿ ಜರುಗಿದ ಕಾಂಗ್ರೆಸ್ ಸಭೆಯಲ್ಲಿ ಮತಕ್ಷೇತ್ರದಲ್ಲಿ ನೂತನವಾಗಿ ಗ್ರಾಪಂಗೆ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಶರಣಪ್ಪ ಸುಣಗಾರ, ಪ್ರಭುಗೌಡ ಲಿಂಗದಳ್ಳಿ, ಬಶೀರ್‌ಅಹ್ಮದ್ ಬೇಪಾರಿ, ಸಂಗನಗೌಡ ಹರನಾಳ, ಸಂತೋಷಗೌಡ ದೊಡ್ಡಮನಿ ಇತರರಿದ್ದರು.
Published on

ದೇವರಹಿಪ್ಪರಗಿ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವು ಅಭೂತಪೂರ್ವ ಯಶಸ್ಸು ಕಂಡು ಅಧಿಕಾರದ ಚುಕ್ಕಾಣಿ ಹಿಡಿದಿದೆ. ಅದೇರೀತಿ ಮತಕ್ಷೇತ್ರದ ಗ್ರಾಪಂಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷ ಬೆಂಬಲಿತರು ಆಯ್ಕೆಯಾಗಿದ್ದಾರೆ. ಇದು ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿಯೂ ಪಕ್ಷದ ಜಯಭೇರಿಗೆ ಮುನ್ಸೂಚನೆಯಾಗಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.

ಪಟ್ಟಣದ ಇಂಡಿ ರಸ್ತೆಯಲ್ಲಿರುವ ಪಂಚಾಚಾರ್ಯ ಕಲ್ಯಾಣಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಪಕ್ಷ ಬೆಂಬಲಿತ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಾರ್ಯಕರ್ತರು ಸಹ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಕ್ರಮವಹಿಸಬೇಕು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆಯುತ್ತಿದೆ ಎಂದರು.

ಸಭೆಯಲ್ಲಿ ಹುಣಶ್ಯಾಳ, ಕೋರವಾರ, ಕೊಂಡಗೂಳಿ, ಚಿಕ್ಕರೂಗಿ, ಕಣಕಾಲ, ಜಾಲವಾದ, ಕಲಕೇರಿ, ಅಸ್ಕಿ, ಸೇರಿದಂತೆ ವಿವಿಧ ಪಂಚಾಯಿತಿಗಳ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಲಾಯಿತು.

ಪ್ರಭುಗೌಡ ಲಿಂಗದಳ್ಳಿ(ಚಬನೂರ), ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಶೀರ್‌ಅಹ್ಮದ್ ಬೇಪಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸಂಗನಗೌಡ ಹರನಾಳ, ಸಂತೋಷಗೌಡ ದೊಡ್ಡಮನಿ, ಸಂಗಮೇಶ ಛಾಯಾಗೋಳ, ಬಾಳಾಸಾಹೇಬಗೌಡ ಪಾಟೀಲ, ಮಹಿಳಾ ಅಧ್ಯಕ್ಷರಾದ ಸರಿತಾ ನಾಯಿಕ, ರಮೀಜಾ ನದಾಫ್, ಲಲಿತಾ ದೊಡ್ಡಮನಿ, ಸುರೇಶಗೌಡ ಬಿರಾದಾರ, ಬಾಪುಗೌಡ ಪೀರಾಪುರ, ಮುರ್ತುಜಾ ತಾಂಬೋಳಿ, ಪ್ರಕಾಶ ಗುಡಿಮನಿ, ರಾಜಕುಮಾರ ಸಿಂದಗೇರಿ, ರಾವುತ ತಳಕೇರಿ ಹಾಗೂ ಕಾರ್ಯಕರ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net