ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ

IMG20230803111817
Published on

ಸಿದ್ದಾಪುರ: ಹೊಸ್ಕೆರಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಹಾಗೂ ಎಂಎಲ್ಸಿ ಸುಜಾ ಕುಶಾಲಪ್ಪ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಎನ್‌ಆರ್‌ಐಜಿ ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣವಾಗಲಿದೆ. ಗ್ರಾಮಸ್ಥರು ಪಂಚಾಯತಿ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಶಾಸಕರು ತಿಳಿಸಿದರು.

ಗ್ರಾಪಂ ಅಧ್ಯಕ್ಷ ಪ್ರಭು ಶೇಖರ್ ಮಾತನಾಡಿ, ಅತ್ತಿಮಂಗಲ, ಅರೇಕಾಡು, ಹೊಸಕೇರಿ, ಮರಗೋಡು ಮಾರ್ಗದ ರಸ್ತೆ ಅಭಿವೃದ್ಧಿ ಕಾಣದೆ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗಿದೆ. ಆದ್ದರಿಂದ ರಸ್ತೆ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿದರು
ಪಿಡಿಒ ಅಬ್ದುಲ್ಲಾ, ಪ್ರಮುಖರಾದ ಯೂಸುಸ್, ಇಸ್ಮಾಯಿಲ್, ಸದ ಡೆನ್ನಿಸ್, ಚಂದನ್ ಹಾಗೂ ಪಂಚಾಯಿತಿ ಸದಸ್ಯರು, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net