ಗ್ರಾಪಂ ಚುನಾವಣೆಗೆ ಸಜ್ಜಾಗಿ

bjp meeting
Published on

ಬೀದರ್: ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರದಲ್ಲಿ ಘೋಷಣೆಯಾಗಲಿದ್ದು, ಪಕ್ಷದ ಕಾರ್ಯಕರ್ತರು ಸಜ್ಜಾಗಬೇಕು ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾರ್ಯಕರ್ತರ ಚುನಾವಣೆಯಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಗ್ರಾಮೀಣ ಭಾಗದಲ್ಲಿ ಸಕ್ರಿಯವಾಗಿರಬೇಕು ಎಂದು ಕರೆ ನೀಡಿದರು.

ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಮಯ ನೀಡಬೇಕು. ಪಕ್ಷವನ್ನು ಬೆಳೆಸಿದರೆ, ಪಕ್ಷವು ನಮ್ಮನ್ನು ಬೆಳೆಸುತ್ತದೆ. ನಿಷ್ಠೆ, ಪ್ರಾಮಾಣಿಕತೆ ಕಾರ್ಯಕರ್ತರಿಗೆ ಪಕ್ಷದಲ್ಲಿ ಬೆಲೆ ಇದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ ಮಾತನಾಡಿ, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ. ಸರ್ಕಾರದ ಜನಪರ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಕೆಲಸ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಮಾಡಬೇಕು ಎಂದು ತಿಳಿಸಿದರು.

ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಜೇಂದ್ರ ಕನಕಟ್ಟಾಕರ್ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಶಿವಕಾಂತ ಹಾರೂರಗೇರಿ, ಸುಧಾಕಾರ, ಸುರೇಶ, ಬಸವರಾಜ ಜೋಜನಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net