ಗ್ರಾಪಂ ಚುನಾವಣೆಗೆ ಸಿದ್ಧತೆ

MBL 1-4
Published on

ಮುದ್ದೇಬಿಹಾಳ: ಮುಂಬರುವ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವುದಕ್ಕೆ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂಗನಗೌಡ ಚಿಕ್ಕೊಂಡ ಹೇಳಿದರು.
ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಪಟ್ಟಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಬಿಜೆಪಿ ಇಂದು ದೇಶದಲ್ಲೇ ಬೃಹತ್ ಪಕ್ಷವಾಗಿದ್ದು, ವಿಶ್ವದಲ್ಲೇ ಅತಿ ಹೆಚ್ಚು ಸದಸ್ಯರನ್ನು ಹೊಂದಿದೆ ಎಂದರು.
ಮಂಡಲ ಅಧ್ಯಕ್ಷ ಪರಶುರಾಮ ಪವಾರ ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ ಅವರ ಗಮನಕ್ಕೆ ತಂದು ಪಟ್ಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಪ್ರಭುಗೌಡ ಬಿರಾದಾರ, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸರಸ್ವತಿ ಪೀರಾಪುರ, ವಕೀಲ ಎಂ.ಡಿ.ಕುಂಬಾರ, ಪ್ರಧಾನ ಕಾರ್ಯದರ್ಶಿ ಮಂಜು ಶೆಟ್ಟಿ, ಸಿದ್ದು ಹೆಬ್ಬಾಳ ಮತ್ತಿತರರು ಇದ್ದರು.

ವಿವಿಧ ಮೋರ್ಚಾಗಳ ಅಧ್ಯಕ್ಷರ ಆಯ್ಕೆ

ಯುವ ಮೋರ್ಚಾ ಅಧ್ಯಕ್ಷರಾಗಿ ಪುನೀತ ಹಿಪ್ಪರಗಿ, ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಗೌರಮ್ಮ ಹುನಗುಂದ, ರೈತ ಮೋರ್ಚಾ ಅಧ್ಯಕ್ಷರಾಗಿ ಮಹಾಂತೇಶ ಗಂಜ್ಯಾಳ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ಲಕ್ಷ್ಮಣ ಬಿಜ್ಜೂರ, ಎಸ್ಟಿ ಮೋರ್ಚಾ ಅಧ್ಯಕ್ಷರಾಗಿ ನರಸಪ್ಪ ಧನ್ನೂರ, ಎಸ್‌ಸಿ ಮೋರ್ಚಾ ಅಧ್ಯಕ್ಷರಾಗಿ ಮಂಜುನಾಥ ಚಲವಾದಿ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಇಕ್ಬಾಲ್ ಮೂಲಿಮನಿ ಅವರನ್ನು ನೇಮಿಸಲಾಗಿದೆ ಎಂದು ಮಂಡಲ ಅಧ್ಯಕ್ಷ ಪರಶುರಾಮ ಪವಾರ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net