ಗ್ರಾಪಂ ನೌಕರರ ಸಮಸ್ಯೆ ಬಗೆಹರಿಸಿ

oppo_2
oppo_2
Published on

ಕಲಬುರಗಿ: ಗ್ರಾಮ ಪಂಚಾಯಿತಿಗಳ ಕರವಸೂಲಿಗಾರ, ಕ್ಲರ್ಕ್, ಡಾಟಾ ಎಂಟ್ರಿ ಆಪರೇಟರ್ಸ್, ನೀರುಗಂಟಿಗಳು, ಜವಾನ, ಸ್ವಚ್ಛತಾಗಾರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು, ಕನಿಷ್ಠ ೩೧ ಸಾವಿರ ನಿಗದಿಪಡಿಸಬೇಕು ಎಂದು ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಭಂಗೂರ ಆಗ್ರಹಿಸಿದರು.
ಗ್ರಾಪಂಗಳ ಕೆಲಸಗಳನ್ನು ಖಾಸಗೀಕರಣ ಮಾಡುವ ನಿರ್ಧಾರ ಕೈಬಿಡಬೇಕು. ೬ ಸಾವಿರ ಪಿಂಚಣಿ ನೀಡಬೇಕು, ವರ್ಗಾವಣೆಗೆ ಅವಕಾಶ ನೀಡಬೇಕು, ನೀರುಗಂಟಿಗಳಿಗೆ ನಿರ್ದಿಷ್ಟ ಕೆಲಸ ನಿಗದಿಪಡಿಸಬೇಕು, ಕರವಸೂಲಿಗಾರರ ಹುದ್ದೆ ನಿಗದಿ ಮಾಡಬೇಕು, ಲೆಕ್ಕ ಸಹಾಯಕ ಹುದ್ದೆ ಸೃಷ್ಟಿಸಬೇಕು, ಶೇ.೫೦ ಸ್ಥಾನಗಳಿಗೆ ಬಡ್ತಿ ನೀಡಬೇಕು, ಗ್ರಾಪಂಗಳನ್ನು ಮೇಲ್ದರ್ಜೆಗೆ ಏರಿಸಬೇಕು, ಸ್ವಚ್ಛತಾಗಾರರನ್ನು ನೇಮಿಸಬೇಕು, ವೇತನ ಹೆಚ್ಚಿಸಬೇಕು, ಆಸ್ಪತ್ರೆ ವೆಚ್ಚ ಭರಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗ್ರೇಡ್ ೧ ಕಾರ್ಯದರ್ಶಿಗಳಿಗೆ ಜಿಲ್ಲಾಮಟ್ಟದಲ್ಲಿ ಮುಂಬಡ್ತಿಗೆ ಅವಕಾಶ ನೀಡಬೇಕು, ಇ- ಹಾಜರಾತಿ ಲೋಪದೋಷ ಸರಿಪಡಿಸಬೇಕು, ಎಲ್ಲ ವಿಭಾಗದ ಹುದ್ದೆ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net