

ಖಾನಾಪುರ: ಸ್ಥಳಿಯ ಅಗತ್ಯತೆಗಳನ್ನು ಪೂರೈಸುವಲ್ಲಿ, ಪಾರದರ್ಶಕತೆ
ತರುವಲ್ಲಿ ಮತ್ತು ಸರ್ವರ ಜವಾಬ್ದಾರಿ ಖಾತ್ರಿಪಡಿಸುವಲ್ಲಿ
ಗ್ರಾಪಂಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಮಹಿಳಾ
ಮತ್ತು ಮಕ್ಕಳ ಅಭಿವೃದಿಟಛಿ ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್
ಹೇಳಿದರು.
ಖಾನಾಪುರ ತಾಲೂಕಿನ ಪಾರವಾಡ ಗ್ರಾಮದಲ್ಲಿ
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ
ಯೋಜನೆಯಡಿ ನಿರ್ಮಿಸಲಾಗಿರುವ ಗ್ರಾಮ ಪಂಚಾಯಿತಿ
ಕಟ್ಟಡ ಬುಧವಾರ ಉದ್ಘಾಟಿಸಿ ಮಾತನಾಡಿದರು.
ವಿಕೇಂದ್ರೀಕರಣ ವ್ಯವಸ್ಥೆಯ ಅತ್ಯಂತ ಪ್ರಮುಖ ಮತ್ತು
ಮೊದಲ ಹಂತದ ಸಂಸ್ಥೆ ಗ್ರಾಮ ಪಂಚಾಯಿತಿ. ಗ್ರಾಮದ
ಪ್ರಗತಿ ಮತ್ತು ಅಭಿವೃದಿಟಛಿಯ ಪ್ರತಿಕ ಗ್ರಾಪಂ. ಈ ಕಟ್ಟಡವು
ಸ್ಥಳಿಯ ಆಡಳಿತ, ಸಮುದಾಯದ ಸಹಭಾಗಿತ್ವ ಮತ್ತು
ಸಾರ್ವಜನಿಕ ಸೇವೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ
ಎಂದರು.
ಶಾಸಕ ವಿಠ್ಠಲ ಹಲಗೇಕರ, ವಿಧಾನ ಪರಿಷತ್ ಸದಸ್ಯ
ಚನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಅರವಿಂದ ಪಾಟೀಲ
ಮಾತನಾಡಿದರು. ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ
ರಮೇಶ ಮೇತ್ರಿ, ಭೀಕಾಜಿ ಗಾವಡೆ, ಅರವಿಂದ ಪಾಟೀಲ
ಪಾರವಾಡ ಗ್ರಾಪಂ ಸದಸ್ಯರು, ತಾಲೂಕಿನ ವಿವಿಧ ಗ್ರಾಪಂಗಳ
ಅಧ್ಯರು, ಉಪಾಧ್ಯರು ಇದ್ದರು.