ಗ್ರಾಮ ಅಭಿವೃದ್ಧಿ ನಿರ್ಮಾಣದ ಬಗ್ಗೆ ಅರಿವು ಮೂಡಿಸಿ

22CBP5Meeting (2)
Published on

ಚಿಕ್ಕಬಳ್ಳಾಪುರ : ಜಿಲ್ಲಾದ್ಯಂತ ಘನತಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ, ಸ್ವಚ್ಛತೆಯ ಉತ್ಸವ-ನಿತ್ಯೋತ್ಸವ ಮಾಸಾಚರಣೆಯನ್ನು ಯಶಸ್ವಿಯಾಗಿ ಕೈಗೊಳ್ಳಲು ಜಿ.ಪಂ.ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚಿಸಿದರು.

ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಘನತಾಜ್ಯ ನಿರ್ವಹಣಾ ಘಟಕ ಏಕರೂಪದ ಬ್ರ್ಯಾಂಡಿಂಗ್ ಲೋಕಾರ್ಪಣೆ, ಸ್ವಚ್ಛತೆ ಉತ್ಸವ-ನಿತ್ಯೋತ್ಸವ ಮಾಸಾಚರಣೆ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಮಹತ್ಮಾ ಗಾಂಧೀಜಿಯವರ ಮಹತ್ವ ಆಲೋಚನೆಯಾದ ಸ್ವಚ್ಛ ಭಾರತ ಹಾಗೂ ಗ್ರಾಮ ಅಭಿವೃದ್ಧಿ ನಿರ್ಮಾಣದ ಬಗ್ಗೆ ಅರಿವು ಮೂಡಿಸಬೇಕು ಎಂದರು.

ಘನ ಮತ್ತು ದ್ರವ ತ್ಯಾಜ್ಯ ವಿಲೇವಾರಿ ಬಗೆಗಿನ ಸಮಸ್ಯೆಗಳನ್ನು ಆಯಾ ತಾಲೂಕು ಮಟ್ಟದಲ್ಲಿಯೇ ಬಗೆಹರಿಸಿಕೊಡಲಾಗುತ್ತದೆ ಎಂದರು.

ಜಿ.ಪಂ.ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯು ಸರ್ಕಾರಕ್ಕೆ ಸಲ್ಲಿಸಿದ 94 ಪ್ರಸ್ತಾವನೆಗಳಿಗೂ ತ್ವರಿತವಾಗಿ ಅನುಮೋದನೆಯಾಗಿದೆ. ಇದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕಾಗಿದೆ. ಹಸಿ-ಒಣ ಕಸಗಳ ಬೇರ್ಪಡಿಕೆ ಮತ್ತು ಸಮರ್ಪಕ ವಿಲೇವಾರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಜಿ.ಪಂ.ಉಪ ಕಾರ್ಯದರ್ಶಿ ಡಾ ಎನ್.ನೋಮೇಶ್ ಕುಮಾರ್, ಯೋಜನಾ ನಿರ್ದೇಶಕ ಕೆ.ಗಿರಿಜಾ ಶಂಕರ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net