ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

CTD T. venktesh---
Published on

ಚಿತ್ರದುರ್ಗ: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 32 ಗ್ರಾಮಾಡಳಿತ ಅಧಿಕಾರಿಗಳ ಹುದ್ದೆಗಳ ಭರ್ತಿ ಕುರಿತಂತೆ ಪ್ರಕಟಿಸಿರುವ ತಾತ್ಕಾಲಿಕ ಹಾಗೂ ಹೆಚ್ಚುವರಿ ಆಯ್ಕೆ ಪಟ್ಟಿಗೆ ಜ.23 ರೊಳಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅರ್ಹ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿಯನ್ನು ಜಿಲ್ಲಾವಾರು ಪ್ರಕಟಿಸಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಅರ್ಹತೆ ಪಡೆದಿರುವ 1158 ಅಭ್ಯರ್ಥಿಗಳ ಪೈಕಿ ಜಿಲ್ಲಾ ಕಂದಾಯ ಘಟಕಕ್ಕೆ ಅನುಮೋದನೆಯಾಗಿರುವ 32 ಹುದ್ದೆಗಳಿಗೆ 1:3 ಅನುಪಾತದಂತೆ ದಾಖಲೆಗಳನ್ನು ಪರಿಶೀಲಿಸಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗಳ ಬಳಿಕ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುವುದು. ಸಿಂಧುತ್ವ ಪ್ರಮಾಣ ಪತ್ರ ಮತ್ತು ಪೊಲೀಸ್ ವರದಿ, ಅಂಕಪಟ್ಟಿ ನೈಜತೆ ಪರಿಶೀಲನೆ ಬಳಿಕ ನೇಮಕಾತಿ ಆದೇಶ ನೀಡಲಾಗುವುದು. ಆಯ್ಕೆಪಟ್ಟಿಯಲ್ಲಿ ಹೆಸರಿದ್ದ ಮಾತ್ರಕ್ಕೆ ಅಭ್ಯರ್ಥಿಗಳಿಗೆ ನೇಮಕಾತಿ ಬಗ್ಗೆ ಯಾವುದೇ ಹಕ್ಕು ಸಾಧಿಸಲು ಬರುವುದಿಲ್ಲ.

ಮೂಲ ದಾಖಲೆಗಳ ಪರಿಶೀಲನೆ ಸಮಯದಲ್ಲಿ ಅಭ್ಯರ್ಥಿಗಳ ದಾಖಲೆಗಳಲ್ಲಿ ಲೋಪದೋಷಗಳೇನಾದರೂ ಕಂಡುಬಂದಲ್ಲಿ ಅಂತಹ ಅಭ್ಯರ್ಥಿಗಳನ್ನು ಆಯ್ಕೆ ಪ್ರಕ್ರಿಯೆಯಿಂದ ಕೈ ಬಿಡಲಾಗುವುದು. ತಾತ್ಕಾಲಿಕ ಆಯ್ಕೆಪಟ್ಟಿ ಹಾಗೂ ಹೆಚ್ಚುವರಿ ಕಾಯ್ದಿರಿಸಿದ ಪಟ್ಟಿ ಮತ್ತು ಗೈರುಹಾಜರಿ/ತಿರಸ್ಕೃತ ಅಭ್ಯರ್ಥಿಗಳ ಪಟ್ಟಿಯನ್ನು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ವೆಬ್‌ಸೈಟ್ https://chitradurga.nic.inನಲ್ಲಿ ತಮ್ಮ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net