ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ನಿಷೇದಾಜ್ಞೆ ಜಾರಿ

6 (1)
ಜಿಲ್ಲಾಧಿಕಾರಿ ಜಾನಕಿ ಕೆ.ಎಂ
Published on

ಬಾಗಲಕೋಟೆ: ಅ.೨೭ ರಂದು ಗ್ರಾಮ ಆಡಳಿತ ಅಽಕಾರಿ ಹುದ್ದೆಯ ಕನ್ನಡ ಪರೀಕ್ಷೆ-೨ ಮತ್ತು ಪೇಪರ್-೧ ಮತ್ತು ಪೇಪರ್-೨ ಪರೀಕ್ಷೆಗಳು ನಡೆಯಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅ.೨೬ ರಿಂದ ೨೭ ರವರೆಗೆ ಪರೀಕ್ಷಾ ಕೇಂದ್ರಗಳ ೨೦೦ ಮೀಟರ್ ಸುತ್ತಮುತ್ತಲಿನ ವ್ಯಾಪ್ತಿಯ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಣೆ ಮಾಡಿ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಆದೇಶ ಹೊರಡಿಸಿದ್ದಾರೆ.

ನಿರ್ಬಂಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಮಾಡಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು/ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಕ್ಷಾರಕ (ಆಸಿಡ್) ಯಾ ಸೋಟಕ ವಸ್ತುಗಳನ್ನು ಕೊಂಡುಹೋಗುವುದನ್ನು ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಽಸಲಾಗಿದೆ. ನಿಷೇಽತ ವಲಯದಲ್ಲಿ ಪರೀಕ್ಷೆಗೆ ಸಂಬಂಽಸಿದ ಯಾವುದೇ ವಿಷಯಗಳನ್ನು ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ನಿಷೇಽಸಿತ ಪ್ರದೇಶದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ೫ ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಯವರೆಗೆ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶದಲ್ಲಿ ಜೆರಾಕ್ಸ್ ಅಂಗಡಿಗಳು ಕಾರ್ಯ ನಿರ್ವಹಿಸುವುದ, ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ದೂರವಾಣಿ, ಬ್ಲೂ ಟೂತ್ ಹಾಗೂ ಪೇಜರ್ ಇತ್ಯಾದಿ ಇಲೆಕ್ಟ್ರಾನಿಕ್ಸ್ ಸಂಪರ್ಕ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net