ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆ ನೀಗಿಸಲು ಯತ್ನ

10Huk2
Published on

ಹುಕ್ಕೇರಿ: ರಾಜ್ಯ ಗ್ರಾಮ ಆಡಳಿತಾಧಿಕಾರಿಗಳು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಶಾಸಕ ನಿಖಿಲ ಕತ್ತಿ ಸೋಮವಾರ ಭೇಟಿ ನೀಡಿದರು.

ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಶಾಸಕ ಕತ್ತಿ ಮಾತನಾಡಿ, ಸರ್ಕಾರದೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು. ತಾಲೂಕಿನಲ್ಲಿ 69 ಗ್ರಾಮ ಆಡಳಿತಾಧಿಕಾರಿಗಳು ಇರಬೇಕು. ಆದರೆ 27 ಆಡಳಿತಾಧಿಕಾರಿಗಳ ಕೊರತೆ ಇದೆ. ಇದರಿಂದ ರೈತರ ಮತ್ತು ಗ್ರಾಮಸ್ಥರ ಸಮಸ್ಯೆಗಳಿಗೆ ಸ್ಪಂದಿಸಲು ತೊಂದರೆಯಾಗಿದೆ. ನಿಮಗೆ ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ, ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ಸೇರಿ ಹತ್ತು ಹಲವು ಬೇಡಿಕೆ ಈಡೇರಿಸಲು ಸಂಬಂಧಿತ ಸಚಿವರು ಮತ್ತು ಮುಖ್ಯಮಂತ್ರಿಗಳ ಬಳಿ ಚರ್ಚಿಸುತ್ತೇನೆ ಎಂದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಎನ್.ಆರ್.ಪಾಟೀಲ, ತಾಲೂಕಾಧ್ಯಕ್ಷ ಉಮೇಶ್ ನಾಗರಾಳಿ, ಉಪಾಧ್ಯಕ್ಷ ಬಿ.ಕೆ.ಚೌಗಲಾ, ಪ್ರಧಾನ ಕಾರ್ಯದರ್ಶಿ ಸೂರಜ ಪರೀಟ, ಉಪ ತಹಸೀಲ್ದಾರ್ ಶ್ರೀಶೈಲ ಮಗದುಮ್ಮ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಅವಿನಾಶ ಹೊಳೆಪ್ಪಗೊಳ, ಗೌರವಾಧ್ಯಕ್ಷ ಎನ್.ಆರ್.ಪಾಟೀಲ, ಜೆ.ಕೆ.ಮಧುಕರ, ಮುಖಂಡರಾದ ಗುರುರಾಜ ಕುಲಕರ್ಣಿ, ಶೀತಲ ಬ್ಯಾಳಿ, ರಾಜು ಮುನ್ನೋಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net