ಗ್ರಾಮ ಆಡಳಿತಾಧಿಕಾರಿಗಳಿಂದ ನಿರ್ದಿಷ್ಟಾವಧಿ ಮುಷ್ಕರ

1
Published on

ಕೆ.ಆರ್.ಪೇಟೆ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳು ತಾಲೂಕು ಕಚೇರಿ ಆವರಣದಲ್ಲಿ 2ನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ.

ಸಂಘದ ಜಿಲ್ಲಾಧ್ಯಕ್ಷ ಹರೀಶ್ ಮಾತನಾಡಿ, ರಾಜ್ಯ ಸಂಘದ ನಿರ್ದೇಶನದಂತೆ ರಾಜ್ಯಾದ್ಯಂತ ಮುಷ್ಕರ ಕೈಗೊಂಡಿದ್ದು, ನಮ್ಮ ನ್ಯಾಯಯುತವಾಗಿ ಕೂಡಲೇ ನಮ್ಮ ಪ್ರಮುಖ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು. ಬಡವರ ಪರವಾಗಿ ನಾವು ಕರ್ತವ್ಯ ನಿರ್ವಹಿಸುತ್ತಿದ್ದು ಕೂಡಲೇ ಗಮನಹರಿಸಿ ಬೇಡಿಕೆ ಈಡೇರಿಬೇಕು.

ನಮ್ಮ ಕರ್ತವ್ಯ ಸಮಯದಲ್ಲಿ ಸೇವೆಗೆ ಅಗತ್ಯವಾಗಿರುವ ಸುಸಜ್ಜಿತ ಕಚೇರಿ, ಕುರ್ಚಿ, ಟೇಬಲ್, ಲ್ಯಾಪ್‌ಟಾಪ್, ಮೊಬೈಲ್, ಸಿಮ್, ಸ್ಕಾೃನರ್ ಸೌಲಭ್ಯ ಒದಗಿಸಬೇಕು. ಸೌಲಭ್ಯಗಳನ್ನು ನೀಡದೆ ನಿಗದಿತ ಸಮಯದಲ್ಲಿ ಕೆಲಸ ಮಾಡಲು ಸರ್ಕಾರ ಸಹಕಾರ ನೀಡಬೇಕು. ಒತ್ತಡ ಹೇರಲಾಗುತ್ತಿದೆ, ಆದರೆ ಸೇವಾ ಸೌಲಭ್ಯ ಮತ್ತು ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಕೆಲಸಕ್ಕೆ ಬಳಸುವ ಮೊಬೈಲ್ ಆ್ಯಪ್‌ಗಳನ್ನು ಸಾಮೂಹಿಕವಾಗಿ ಡಿಲೀಟ್ ಮಾಡಿ ಕೈಗೆ ಕಪ್ಪುಬಟ್ಟೆ ಧರಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ದಶರತ್ ಪೂಜಾರಿ, ಉಪಾಧ್ಯಕ್ಷೆ ಸಾವಿತ್ರಿ, ಕಾರ್ಯದರ್ಶಿ ಬಿ.ಹೊನ್ನೇಸ್, ಖಜಾಂಚಿ ಕಾವ್ಯಗೌಡ, ಸದಸ್ಯರಾದ ಮಧು, ಶ್ವೇತಾ, ಪೂಜಾ, ಸೋಮಚಾರಿ ಮತ್ತಿತರರು ಹಾಜರಿದ್ದರು.

ಸಾರ್ವಜನಿಕರಿಗೆ ತೊಂದರೆ: ವಿವಿಧ ಬೇಡಿಕೆ ಈಡೇರಿಸುವಂತೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ರೈತರ ಕೆಲಸಗಳು ಸ್ಥಗಿತಗೊಂಡಿರುವುದರಿಂದ ಪರದಾಡುವಂತಾಗಿದೆ. ರೈತರು ಕೆಲಸ ಮಾಡಿಸಿಕೊಳ್ಳಲಾಗದೆ ಬರಿಗೈಯಲ್ಲಿ ಹಿಂದಿರುಗುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net