ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

Published on

ಚಾಮರಾಜನಗರ: ಜಿಲ್ಲೆಯ 15 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ತೆರೆಯಲು ಆನ್‌ಲೈನ್ ಮೂಲಕ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಚಾಮರಾಜನಗರ ತಾಲೂಕಿನ ಶಿವಪುರ, ಪುಣಜನೂರು, ಬೋಗಾಪುರ, ಮಸಣಾಪುರ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದು, ಗುಂಡ್ಲುಪೇಟೆ ತಾಲೂಕಿನ ಕಣ್ಣೇಗಾಲ, ಬಾಚಹಳ್ಳಿ, ಬಳಚವಾಡಿ ಗ್ರಾಮ ಪಂಚಾಯಿತಿಯಲ್ಲಿ ತಲಾ ಒಂದು, ಆಲತ್ತೂರು ಗ್ರಾಮ ಪಂಚಾಯಿತಿಯಲ್ಲಿ 2, ಕೊಳ್ಳೇಗಾಲ ತಾಲೂಕಿನ ಸಿಂಗನಲ್ಲೂರು, ಟಗರುಪುರ, ಧನಗೆರೆ, ಮಧುವನಹಳ್ಳಿ, ತಿಮ್ಮರಾಜಿಪುರ, ಯಳಂದೂರು ತಾಲೂಕಿನ ಗೌಡಹಳ್ಳಿ ಹಾಗೂ ಹನೂರು ತಾಲೂಕಿನ ಅಜ್ಜಿಪುರ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಗ್ರಾಮ ಒನ್ ಕೇಂದ್ರಗಳು ಸೇರಿದಂತೆ ಒಟ್ಟು 16 ಕೇಂದ್ರಗಳನ್ನು ತೆರೆಯಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್ ನಲ್ಲಿ ಏ.15 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 9148712473 ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net