ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸುಜಾತ ಗಣೇಶ್

5 ckm 7
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸುಜಾತ ಗಣೇಶ್ ಅವರನ್ನು ಸಹ ಸದಸ್ಯರು ಅಭಿನಂದಿಸಿದರು.
Published on

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗೋಣಿಬೀಡು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ಸುಜಾತ ಗಣೇಶ್ ಮಂಗಳವಾರ ಅವಿರೋಧವಾಗಿ ಆಯ್ಕೆಯಾದರು.

ಪಂಚಾಯಿತಿ ಸಭಾಂಗಣದಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಸುಜಾತ ಹೊರತುಪಡಿಸಿ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಎಚ್.ಎನ್.ಸುಮ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಈ ವೇಳೆ ಮಾತನಾಡಿದ ನೂತನ ಉಪಾಧ್ಯಕ್ಷೆ ಸುಜಾತ ಗಣೇಶ್, ಸರ್ಕಾರದಿಂದ ದೊರೆಯುವ ಅನುದಾನವನ್ನು ತಂದು ಜಾತಿ ತಾರತಮ್ಯವೆಸಗದೇ ಸರ್ವರಿಗೂ ಉತ್ತಮ ಸೇವೆ ಒದಗಿಸಲು ಮುಂದಾಗುತ್ತೇನೆ. ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ಸಹಕಾರ ಬಹಳಷ್ಟು ಅವಶ್ಯವಿದೆ ಎಂದರು.

ಡಿಎಸ್‌ಎಸ್ ಮುಖಂಡ ಸುಂದ್ರೇಶ್ ಹೊಯ್ಸಳಲು ಮಾತನಾಡಿ, ಪಂಚಾಯಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆ ಹೊರತುಪಡಿಸಿ ಎಲ್ಲವೂ ಅನುಕೂಲವಾಗಿದೆ. ನೂತನ ಉಪಾಧ್ಯಕ್ಷರು ರಸ್ತೆ ಸೇರಿದಂತೆ ಶುದ್ಧ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಿ ಗ್ರಾಮಸ್ಥರಿಗೆ ಸಹಕರಿಸಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ದಿನೇಶ್, ಸದಸ್ಯರಾದ ಮಹೇಶ್, ಆನಂದ್, ರಾಧಾ ಮಿತ್ರೇಶ್, ಭಾರತಿ ಪ್ರಕಾಶ್, ರೇಣುಕಾ, ಪ್ರಹ್ಲಾದ್, ವಿಜೇಂದ್ರ, ದೀಪಕ್, ಚಂದ್ರಶೇಖರ್, ಸುಧಾಮಣಿ, ಸುಜಾತ, ಶರತ್, ಮಹೇಶ್, ಕೃಷ್ಣಪ್ಪ, ಸೌಭಾಗ್ಯ, ರಘು, ಜುಬೇಧ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net