

ಸುಂಟಿಕೊಪ್ಪ: ಮೊಗೇರ ಸಮುದಾಯದವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಮೊಗೇರ ಸೇವಾ ಸಮಾಜದ ಸ್ಥಾಪಕ ಅಧ್ಯಕ್ಷ ಟಿ.ಸದಾನಂದ ಹೇಳಿದರು.
ಸುಂಟಿಕೊಪ್ಪದ ಗುಂಡುಗುಟ್ಟಿ ಮಂಜುನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ ಮೊಗೇರ ಗ್ರಾಮ ವಿಕಾಸ ಯೋಜನೆಯ ಪ್ರಥಮ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. 20 ವರ್ಷಗಳ ಹಿಂದೆ ಕೊಡಗಿನಲ್ಲಿ ಮೊಗೇರ ಸಮಾಜ ಸ್ಥಾಪಿಸುವಾಗ ಆನೇಕ ಸಮಸ್ಯೆ ಇದ್ದವು. ಸಂಘಟನೆ ಬಲವಾದಂತೆ ಹಲವರು ರಾಜಕೀಯವಾಗಿ, ಶೈಕ್ಷಣಿಕವಾಗಿ ಪ್ರಗತಿ ಹೊಂದಿ ಪ್ರಾತಿನಿಧ್ಯ ಪಡೆದರು ಎಂದರು. ನಮ್ಮ ಸಮುದಾಯದ ಮಕ್ಕಳು ಐಎಎಸ್, ಐಪಿಎಸ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಮಟ್ಟದ ಅಧಿಕಾರಿಗಳಾಗಬೇಕು ಎಂದರು.
ಮೊಗೇರ ಸೇವಾ ಸಮಾಜದ ಜಿಲ್ಲಾಧ್ಯಕ್ಷ ಪಿ.ಬಿ.ಜನಾರ್ಧನ ಮಾತನಾಡಿ 20 ವರ್ಷದ ಪರಿಶ್ರಮದ ಫಲವಾಗಿ ಮೊಗೇರ ಸಮಾಜ ಸಂಘಟನಾತ್ಮಕವಾಗಿ ಬೆಳೆಯುತ್ತಾ ಬಂದಿದೆ. ಸಮುದಾಯದ ಪ್ರತಿಯೊಬ್ಬರಿಗೂ ಸೂಕ್ತ ಶಿಕ್ಷಣ, ಆರೋಗ್ಯ, ಮನೆ ದೊರಕುವಂತಾಗಬೇಕು ಎಂದರು.