ಗ್ರಾಮಗಳ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅಗತ್ಯ

20. PYP. 01
ಪಿರಿಯಾಪಟ್ಟಣ ತಾಲೂಕಿನ ತಿಮಕಾಪುರ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಕೆ.ಮಹದೇವ್ ಭೂಮಿಪೂಜೆ ನೆರವೇರಿಸಿದರು. ಅಣ್ಣಯ್ಯ ಶೆಟ್ಟಿ, ದಾಸೇಗೌಡ, ಚಿಕ್ಕೇಗೌಡ, ಜಿ.ಶಂಕರ್ ಇದ್ದರು.
Published on

ಪಿರಿಯಾಪಟ್ಟಣ: ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯ ಎಂದು ಶಾಸಕ ಕೆ.ಮಹದೇವ್ ಹೇಳಿದರು.

ತಾಲೂಕಿನ ತಿಮಕಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದ ಅಭಿವೃದ್ಧಿ ವಿಷಯದಲ್ಲಿ ಗ್ರಾಮಸ್ಥರೆಲ್ಲರೂ ಜೇನುಗೂಡಿನಂತೆ ಒಗ್ಗಟ್ಟಾಗಿ ಇದ್ದರೆ ಮಾತ್ರ ಅಭಿವೃದ್ಧಿ ಕಾರ್ಯಗಳು ಸುಲಲಿತವಾಗಿ ನಡೆಯಲಿದೆ ಎಂದರು. ಗ್ರಾಮಕ್ಕೆ ಶಾಶ್ವತ ಕಾವೇರಿ ಕುಡಿಯುವ ನೀರು ಒದಗಿಸಲು ಒಂದು ಕೋಟಿ ರೂ. ಬಿಡುಗಡೆಯಾಗಿದ್ದು, ಶೀಘ್ರ ಕಾಮಗಾರಿ ಆರಂಭಿಸಲಾಗುವುದು ಎಂದರು.

ಜೆಡಿಎಸ್ ಮುಖಂಡ ಜಿ.ಶಂಕರ್ ಮಾತನಾಡಿದರು. ಕಾರ್ಯಕ್ರಮದಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಚೌತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪಟೇಲ್ ಲಕ್ಷ್ಮಣ್, ಗ್ರಾಮ ಸದಸ್ಯೆ ಚಂದ್ರಕಲಾ, ಗ್ರಾಮದ ಮುಖಂಡರಾದ ದಾಸೇಗೌಡ, ಎಚ್.ಬಿ.ಸುರೇಶ್, ಚಿಕ್ಕೇಗೌಡ, ಗ್ರಾಮೀಣ ನೈರ್ಮಲ್ಯ ಮತ್ತು ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಪ್ರಭು, ಜಿಪಂ ಎಇಇ ಮಲ್ಲಿಕಾರ್ಜುನ್, ಪಾಷಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net