ಗ್ರಾಮಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸಿ

Published on

ಚಿಂಚೋಳಿ: ಕ್ಷೇತ್ರದ ಪ್ರತಿ ಗ್ರಾಮಕ್ಕೂ ಸೂಕ್ತ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ರೈತ ಮುಖಂಡ ಶರಣಬಸಪ್ಪ ಮಮಶೆಟ್ಟಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಕೋಡ್ಲಿ ಕ್ರಾಸ್ ಬಳಿ ರಸ್ತೆಯಲ್ಲಿ ಸಂಚಾರ ತಡೆದು ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಾಳಗಿ-ಚಿಂಚೋಳಿ ತಾಲೂಕಿನ ಬಹುತೇಕ ಹಳ್ಳಿಗಳಿಗೆ ಸರಿಯಾದ ಸಮಯಕ್ಕೆ ಬಸ್ಗಳು ಬರುವುದಿಲ್ಲ. ಇದರಿಂದ ಶಾಲೆ- ಕಾಲೇಜಿಗೆ ಹೋಗುವ ಮಕ್ಕಳು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಸಾರಿಗೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದರು.

ಕೂಡಲೇ ರಟಕಲ್, ಕಂಚನಾಳ, ಹುಲಸಗೂಡ, ರಟಕಲ್ ತಾಂಡಾ, ಸುಂಠಾಣ ಸೇರಿ ಬಹುತೇಕ ಗ್ರಾಮಗಳಿಗೆ ಶಾಲೆ ಸಮಯಕ್ಕೆ ಬಸ್ ಓಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ನಿರಂತರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾಳಗಿ ಸಾರಿಗೆ ವ್ಯವಸ್ಥಾಪಕ ಯಶವಂತ ಯಾತನೂರ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು.

ಪ್ರಮುಖರಾದ ಅನೀಲಕುಮಾರ ರಾಠೋಡ್, ಅರುಣಕುಮಾರ ರಾಠೋಡ್, ತಾರಚಂದ ರಾಠೋಡ್, ಪವನಕುಮಾರ, ಶ್ರಾವಣಕುಮಾರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net