ಗ್ರಾಮಗಳು ಬಯಲು ಶೌಚ ಮುಕ್ತವಾಗಲಿ

Swachha bharat abhiyan
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಬೀದರ್: ಜಿಲ್ಲೆಯ ಪ್ರತಿ ಗ್ರಾಮವೂ ಬಯಲು ಶೌಚ ಮುಕ್ತವಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಎಂ. ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯಿಂದ ಸ್ವಚ್ಛ ಭಾರತ ಅಭಿಯಾನದ ಮಾಹಿತಿ, ಶಿಕ್ಷಣ ಹಾಗೂ ಸಂವಹನದ ಅಡಿಯಲ್ಲಿ ಹೊರ ತರಲಾದ ಘನ ತ್ಯಾಜ್ಯ ನಿರ್ವಹಣೆ, ಗೋಬರ್ ಧನ್, ಒಡಿಎಫ್ ಸುಸ್ಥಿರತೆ, ಋತುಚಕ್ರ ನಿರ್ವಹಣೆ ಹಾಗೂ ಸಮುದಾಯ ಶೌಚಾಲಯ ಕುರಿತ ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಸ್ವಚ್ಛ ಭಾರತ ಅಭಿಯಾನದಡಿ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯು ಜಿಲ್ಲೆಯನ್ನು ಬಯಲು ಶೌಚಮುಕ್ತಗೊಳಿಸಲು ಅಭಿಯಾನ ನಡೆಸಿದೆ. ಅಭಿಯಾನ ಯಶಸ್ವಿಗೆ ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾಮಟ್ಟದ ಎಲ್ಲ ಅನುಷ್ಠಾನ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಅಭಿವೃದ್ಧಿ ಅಧಿಕಾರಿಗಳು ಹಾಗೂ ನೌಕರರು ಸಾರ್ವಜನಿಕರಲ್ಲಿ ನೈರ್ಮಲ್ಯ ಹಾಗೂ ವೈಯಕ್ತಿಕ ಶುಚಿತ್ವದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆ ಕ್ಷಯ ರೋಗಿಗಳನ್ನು ದತ್ತು ಪಡೆದು ಕ್ಷಯರೋಗ ಮುಕ್ತ ಭಾರತ ಅಭಿಯಾನಕ್ಕೆ ಕೈಜೋಡಿಸಿದೆ. ಕೋವಿಡ್ ಸಂದರ್ಭದಲ್ಲಿ ಜನಸಾಮಾನ್ಯರಿಗೆ ನೆರವಾಗಿದೆ ಎಂದು ಶ್ಲಾಘಿಸಿದರು.
ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, ತರಬೇತಿ ಹಾಗೂ ಸಾರ್ವಜನಿಕ ಸಭೆಗಳ ಮೂಲಕ ಗ್ರಾಮದಿಂದ ಜಿಲ್ಲಾಮಟ್ಟದ ವರೆಗೆ ನೈರ್ಮಲ್ಯ ಹಾಗೂ ವೈಯಕ್ತಿಕ ಶುಚಿತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಸ್ವಚ್ಛ ಹಾಗೂ ಬಯಲು ಶೌಚಮುಕ್ತ ಜಿಲ್ಲೆ ಅಭಿಯಾನಕ್ಕೆ ಪ್ರತಿಯೊಬ್ಬರೂ ಸಾಥ್ ನೀಡಬೇಕು. ಗಾಂಧೀಜಿ ಅವರ ಸ್ವಚ್ಛ ಭಾರತ ಕನಸು ನನಸಾಗಿಸಲು ಸಹಕರಿಸಬೇಕು ಎಂದು ಹೇಳಿದರು.
ಸದ್ಯ ಮಳೆಗಾಲ ಆರಂಭ ಆಗಿರುವುದರಿಂದ ಸ್ವಚ್ಛತೆ ಕಾಪಾಡಿಕೊಳ್ಳುವುದು ಬಹಳ ಅವಶ್ಯಕವಾಗಿದೆ ಎಂದರು.
ಜಿಲ್ಲಾ ಪಂಚಾಯಿತಿಯ ಮುಖ್ಯ ಯೋಜನಾಧಿಕಾರಿ ಶರಣಯ್ಯ ಮಠಪತಿ ಮಾತನಾಡಿ, ಗ್ರಾಮ ಮಟ್ಟದಲ್ಲಿ ಸ್ವಸಹಾಯ ಗುಂಪು, ನೈರ್ಮಲ್ಯ ಸಮಿತಿ ಸದಸ್ಯರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಲೆಕ್ಕ ಸಹಾಯಕ ಪ್ರವೀಣ ಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net