ಗ್ರಾಮಸ್ಥರ ಸಹಕಾರದಿಂದ ಅಂಬೇಡ್ಕರ್ ಪ್ರತಿಮೆ ಅನಾವರಣ

15blrp2
Published on


ಬೇಲೂರು: ತಾಲೂಕಿನ ಅರೇಹಳ್ಳಿ ಭಾಗದ ಸುತ್ತ ಮುತ್ತಲಿನ ಗ್ರಾಮಸ್ಥರ ಸಹಕಾರದಿಂದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಗೊಳಿಸಲು ಸಾಧ್ಯವಾಯಿತು ಎಂದು ದಲಿತ ಮುಖಂಡ ಹಾಗೂ ವಕೀಲ ರಾಜು ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜಯಂತಿ ಅಂಗವಾಗಿ ತಾಲೂಕಿನ ಅರೇಹಳ್ಳಿ ಅಂಬೇಡ್ಕರ್ ವೃತ್ತದಲ್ಲಿ ಶುಕ್ರವಾರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಸರಳವಾಗಿ ಕಾರ್ಯಕ್ರಮ ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಅಂಬೇಡ್ಕರ್ ಅವರ ಚಿಂತನೆಗಳೊಂದಿಗೆ ಎಲ್ಲರ ಸಹಕಾರ ಪಡೆದು ಅದ್ದೂರಿ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದರು.

ಅರೇಹಳ್ಳಿ ಪೊಲೀಸ್ ಠಾಣೆ ಆರಕ್ಷಕ ಉಪ ನಿರೀಕ್ಷಕ ಸಿ.ಎಸ್.ಸುರೇಶ್ ಮಾತನಾಡಿ, ಅಂಬೇಡ್ಕರ್ ಜಯಂತಿ ಕೇವಲ ಆಚರಣೆಗೆ ಮಾತ್ರ ಸೀಮಿತವಾಗಬಾರದು. ಮಹಾನ್ ವ್ಯಕ್ತಿ ಸಮಾಜಕ್ಕೆ ಕೊಟ್ಟಂತಹ ಕೊಡುಗೆಗಳನ್ನು ನಾವು ನೆನಪು ಮಾಡಿಕೊಳ್ಳಬೇಕು. ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖಂಡರಾದ ನಿಂಗರಾಜು, ಅಣ್ಣಪ್ಪ, ದೇವರಾಜು, ರಾಜು, ಕೆ.ಎಂ.ಕುಮಾರ್, ಲಕ್ಷ್ಮಣ್, ಮಲ್ಲಿಕಾರ್ಜುನ್ ನಾರ್ವೆ, ಸೋಮಯ್ಯ, ಗಣೇಶ್, ನವೀನ್ ಪ್ರಸಾದ್, ಧರ್ಮರಾಜು, ರುದ್ರೇಶ್, ವಿರಾಜು ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net