ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸೇತುವೆ ನಿರ್ವಿುಸಲು ಶೆಟ್ಟರ್ ಸೂಚನೆ

h9-byepass
Published on

ಹುಬ್ಬಳ್ಳಿ: ಕಟ್ನೂರು ಹಾಗೂ ಮಾವೂರು ಗ್ರಾಮಸ್ಥರಿಗೆ ಅನುಕೂಲವಾಗುವಂತೆ ಸೇತುವೆ ನಿರ್ವಿುಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಇಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.

ಸೋಮವಾರ ಹುಬ್ಬಳ್ಳಿ ವರ್ತಲ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ವೇಳೆ ಅವರು ಗ್ರಾಮಸ್ಥರ ಹವಾಲು ಸ್ವೀಕರಿಸಿ ಮಾತನಾಡಿದರು.

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳೀಯ ಜನರ ಅಗತ್ಯಗಳಿಗೆ ಅನುಗುಣವಾಗಿ ಯೋಜನೆ ರೂಪಿಸಬೇಕು. ಯೋಜನೆಯ ಬಗ್ಗೆ ಜನಪ್ರತಿನಿಧಿಗಳ ಅಭಿಪ್ರಾಯ ಪಡೆದು ಅನುಷ್ಠಾನಗೊಳಿಸಬೇಕು. ಕಟ್ನೂರು ಹಾಗೂ ಮಾವೂರು ಸೇತುವು ಕಿರಿದಾಗಿದ್ದು ಜನರು ಬವಣೆ ಪಡುವಂತಾಗಿದೆ. ಬೂದಿಹಾಳ ರಸ್ತೆಯಲ್ಲಿ ಸೇತುವೆ ನಿರ್ವಿುಸಿದೇ ಇರುವುದರಿಂದ ರೈತರಿಗೆ ತೊಂದರೆಯಾಗಿದೆ. ಇವುಗಳನ್ನು ಸರಿಪಡಿಸಿ ರಸ್ತೆ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಿಜೆಪಿ ಮುಖಂಡ ಮಹೇಶ ಟೆಂಗಿನಕಾಯಿ, ಚಂದ್ರಶೇಖರ ಗೋಕಾಕ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net