ಗ್ರಾಮಸ್ಥರಿಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

8blrp7
ಹಳೇಬೀಡು ಗ್ರಾಮಸ್ಥರಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ವಿತರಿಸಿ ಮಾಹಿತಿ ನೀಡುತ್ತಿರುವ ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ಇತರರು
Published on

ಬೇಲೂರು: ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಳೇಬೀಡು ಬೂತ್ ನಂ.86ರ ಹಳೇಸಂತೆ ಬೀದಿಯಲ್ಲಿ ಕಾಂಗ್ರೆಸ್ ಮುಖಂಡ ಗ್ರಾನೈಟ್ ರಾಜಶೇಖರ್ ನೇತೃತ್ವದಲ್ಲಿ ಗ್ರಾಮಸ್ಥರಿಗೆ ಗ್ಯಾರಂಟಿ ಕಾರ್ಡ್ ವಿತರಿಸಲಾಯಿತು.

ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ನೀಡಿದ್ದ ಎಲ್ಲ ಭರವಸೆಗಳನ್ನೂ ಈಡೇರಿಸುವ ಮೂಲಕ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿತ್ತು. ಆದರೆ, ಈಗಿನ ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಹಗರಣಗಳಲ್ಲೇ ಕಾಲಾಹರಣ ಮಾಡುತ್ತಿದೆ. ಆದರೆ ಇದನ್ನು ನೋಡಿಯೂ ಸುಮ್ಮನಿರದ ಕಾಂಗ್ರೆಸ್, ಅಧಿಕಾರಕ್ಕೆ ಬಂದಾಗ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬದ ಮಹಿಳೆಗೆ 2000 ರೂ., 10 ಕೆಜಿ ಅಕ್ಕಿ ಉಚಿತವಾಗಿ ನೀಡುವುದಾಗಿ ಪಕ್ಷ ಘೋಷಿಸಿದೆ. ಆದ್ದರಿಂದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಮನೆ ಮನೆಗೂ ತಲುಪಿಸುವ ಕೆಲಸ ಮಾಡಲಾಗುವುದು ಎಂದರು.

ಜಿಪಂ ಮಾಜಿ ಸದಸ್ಯ ವೈ.ಎನ್.ಕೃಷ್ಣೇಗೌಡ, ಹಳೇಬೀಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿರೂಪಾಕ್ಷ, ಯುವ ಕಾಂಗ್ರೆಸ್ ಅಧ್ಯಕ್ಷ ದರ್ಶನ್, ಮುಖಂಡರಾದ ವೆಂಕಟೇಶ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net