ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಕ್ಕೆ ಆದ್ಯತೆ : ಶಾಸಕ ಡಿ.ಸಿ.ಗೌರಿಶಂಕರ್

31TMK_Gowrishankar_MLA
Published on

ತುಮಕೂರು: ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಆದ್ಯತೆ ನೀಡಲಾಗಿದ್ದು, ರಾಜಕೀಯ ಎಂಬುದು ಚುನಾವಣೆ ಸಂದರ್ಭದಲ್ಲಿ ಮಾತ್ರ ಎಂದು ಶಾಸಕ ಡಿ.ಸಿ.ಗೌರಿಶಂಕರ್ ಹೇಳಿದರು.

ಬಿದರಕಟ್ಟೆ ಕಾವಲ್, ಊರ್ಡಿಗೆರೆ ಹಾಗೂ ಡಿ.ಎಸ್.ಪಾಳ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ತುಮಕೂರು ವಿವಿ ಕ್ಯಾಂಪಸ್ ನಿರ್ಮಾಣವಾದರೆ ಬಿದರಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಉದ್ಯೋಗ ಸೃಷ್ಟಿಯಾಗಿ ಆರ್ಥಿಕ ಚಟುವಟಿಕೆಗೆ ಬಲ ಬರಲಿದೆ ಎಂದರು.

8.40 ಕೋಟಿ ರೂ. ವೆಚ್ಚದಲ್ಲಿ ಕಲಾಭವನ, ವಿಜ್ಞಾನಕೇಂದ್ರ, ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಕಟ್ಟಡ ಕಾಮಗಾರಿ ಚಾಲನೆ ನೀಡಲಾಗಿದೆ, ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಸೂಚಿಸಿದರು. ನಂತರ ಪ್ರತ್ಯೇಕವಾಗಿ ನಾಗವಲ್ಲಿ-ಶಿವಗಂಗೆ ರಸ್ತೆ 1.60 ಕೋಟಿ ರೂ.ವೆಚ್ಚದ ರಸ್ತೆ ಕಾಮಗಾರಿ, ಊರ್ಡಿಗೆರೆ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 59 ಲಕ್ಷ ರೂಪಾಯಿ ವೆಚ್ಚದ ಪ್ರಾಥಮಿಕ ಶಾಲಾ ಕಟ್ಟಡ ಕಾಮಗಾರಿ, ಹೆಬ್ಬೂರು ಹೋಬಳಿ ಡಿ.ಎಸ್. ಪಾಳ್ಯದಲ್ಲಿ ಹೇಮಾವತಿ ನಾಲಾವಲಯದಿಂದ 50 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯ್ಕ, ಎಇಇ ಹರೀಶ್, ಎಇ ಮಂಜುನಾಥ್, ಜೆಡಿಎಸ್ ಮುಖಂಡ ಹಾಲನೂರು ಅನಂತಕುಮಾರ್, ಬೈರೇಗೌಡ, ಸುವರ್ಣಗಿರಿ ಕುಮಾರ್, ಮಸ್ಕಲ್ ಮೋಹನ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net