

ಹೂವಿನಹಡಗಲಿ: ಗ್ರಾಮಾಡಳಿತ ಅಧಿಕಾರಿಗಳಿಗೆ ಆಯಾ ಗ್ರಾಮಗಳಲ್ಲಿ ಕಚೇರಿ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಕೃಷ್ಣನಾಯ್ಕ ಹೇಳಿದರು.
ಪಟ್ಟಣದ ತಹಸಿಲ್ ಕಚೇರಿ ಮುಂಭಾಗದಲ್ಲಿ ಗ್ರಾಮಾಡಳಿತ ಸಂಘದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದರು. ಗ್ರಾಮಾಡಳಿತ ಅಧಿಕಾರಿಗಳ ಮುಷ್ಕರಕ್ಕೆ ನನ್ನ ಬೆಂಬಲವಿದೆ. ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗುವುದು. ತಂತ್ರಜ್ಞಾನದ ಬಳಕೆಯಿಂದ ಬಹುಬೇಗನೆ ಸಾರ್ವಜನಿಕರ ಕೆಲಸಗಳನ್ನು ಪೂರ್ಣಗೊಳಿಸಬಹುದು. ರೈತರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸಿ ಎಂದರು.
ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಡಿ.ಜಿ.ಮಲ್ಲೇಶ್ ನಾಯ್ಕ ಮಾತನಾಡಿ, ಅನೇಕ ಒತ್ತಡಗಳ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮಾಡಳಿತ ಅಧಿಕಾರಿಗಳಿಗೆ ಸರ್ಕಾರ ಸೌಲಭ್ಯಗಳನ್ನು ಒದಗಿಸಿದರೆ ಅನಕೂಲವಾಗುತ್ತದೆ. ಬಡ್ತಿ ಸಂದರ್ಭದಲ್ಲಿ ಕಂದಾಯ ಇಲಾಖೆಯ ಇತರ ಸಿಬ್ಬಂದಿಗೆ ಅನ್ವಯವಾಗುವ ನಿಯಮ ಜಾರಿಗೆ ತರಬೇಕು ಎಂದರು.
ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾಪಂ ಮಾಜಿ ಅಧ್ಯಕ್ಷ ಪ್ರಕಾಶ್, ಮಾಜಿ ಸದಸ್ಯ ತೋಟಾನಾಯ್ಕ, ಬಿಜೆಪಿ ಮಾಜಿ ಮಂಡಲ ಅಧ್ಯಕ್ಷ ಹಣ್ಣಿ ಶಶಿಧರ್, ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಉಪಾಧ್ಯಕ್ಷ ಸಿದ್ದಲಿಂಗೇಶ, ಕಾರ್ಯದರ್ಶಿ ಸೋಮಪ್ಪ, ರಾಜ್ಯ ಸಂಘಟನಾ ಕಾರ್ಯದರ್ಶಿ ಮಲ್ಲೇಶ್ ಗುಡಿಮನೆ, ಗ್ರಾಮಾಡಳಿತ ಅಧಿಕಾರಿಗಳಾದ ಜಗದೀಶ, ಪ್ರವೀಣ್, ಅಶೋಕ, ಮಂಜುಳಾ, ಪ್ರೇಮಲತಾ ಇತರರಿದ್ದರು.