ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಿ

6 Dwd 8
Published on

ಧಾರವಾಡ: ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ನರೇಗಾ ಕುರಿತು ವ್ಯಾಪಕ ಪ್ರಚಾರ ಮಾಡಬೇಕು. ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸಬೇಕು. ರೈತರಿಗೆ ಪೂರಕವಾದ ಚಟುವಟಿಕೆಗಳನ್ನು ನರೇಗಾ ಅಡಿ ಕೈಗೆತ್ತಿಕೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷೆ ವಿಜಯಲಕ್ಷ್ಮೀ ಪಾಟೀಲ ಹೇಳಿದರು.

ನಗರದ ಜಿ.ಪಂ. ಸಭಾಭವನದಲ್ಲಿ ಸೂಕ್ಷ್ಮ ಗ್ರಾಮ- ಸ್ವಚ್ಛ ಪರಿಸರ ದಿನಾಚರಣೆ ಅಂಗವಾಗಿ ಶನಿವಾರ ನರೇಗಾ ಕುರಿತ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇದು ಉದ್ಯೋಗ ಬಯಸುವ ತಲಾ ಕುಟುಂಬಕ್ಕೆ ವರ್ಷದಲ್ಲಿ 100 ದಿನಗಳ ಉದ್ಯೋಗದ ಖಾತ್ರಿ ನೀಡುವ ಯೋಜನೆಯಾಗಿದೆ. ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಜನರ ನೋವಿಗೆ ಸ್ಪಂದಿಸಲು ವಿಶೇಷ ಚಟುವಟಿಕೆಗಳನ್ನು ಕೈಗೊಳ್ಳಲಾಗಿದೆ ಎಂದರು.

ಉಪಾಧ್ಯಕ್ಷ ಶಿವಾನಂದ ಕರಿಗಾರ ಮಾತನಾಡಿ, ಕೋವಿಡ್ 19ರ ಹಿನ್ನೆಲೆಯಲ್ಲಿ ಬೇರೆ ಜಿಲ್ಲೆ ಮತ್ತು ರಾಜ್ಯಗಳಿಗೆ ಉದ್ಯೋಗ ಅರಸಿ ಹೋದ ಜನರು ತಮ್ಮ ಸ್ವಗ್ರಾಮಕ್ಕೆ ಬಂದಿದ್ದಾರೆ. ಅವರ ಗ್ರಾಮಗಳಲ್ಲೇ ಉದ್ಯೋಗ ಒದಗಿಸುವ ಸಲುವಾಗಿ ಗ್ರಾ.ಪಂ.ಗಳಿಂದ ಉದ್ಯೋಗ ಚೀಟಿಗಳನ್ನು ಒದಗಿಸಲಾಗಿದೆ. ಗ್ರಾಮಗಳಲ್ಲಿ ವಾಸವಿರುವ ಜನರು 3 ತಿಂಗಳಿಂದ ಲಾಕ್​ಡೌನ್ ಹಿನ್ನೆಲೆಯಲ್ಲಿ ಉದ್ಯೋಗಕ್ಕೆ ಹೋಗದಿರುವುದರಿಂದ ಅವರ ಆರ್ಥಿಕ ಸ್ಥಿತಿ ಸರಿಯಾಗಿಲ್ಲ. ಅವರನ್ನು ಸ್ಥಳೀಯವಾಗಿ ಲಭ್ಯ ಉದೋಗಕ್ಕೆ ಮನ ಸಳೆಯುವ ಉದ್ದೇಶದಿಂದ ಹಲವು ಉಪಕ್ರಮಗಳನ್ನು ಜಿ.ಪಂ., ತಾ.ಪಂ., ಗ್ರಾ.ಪಂ.ಗಳು ಮಾಡುತ್ತಿವೆ. ಕೂಲಿ ದರ ಏ. 1ರಿಂದ 275 ರೂ.ಗೆ ಏರಿಕೆಯಾಗಿದೆ ಎಂದರು.

ಜಿ.ಪಂ. ಉಪ ಕಾರ್ಯದರ್ಶಿ, ಮುಖ್ಯ ಯೋಜನಾಧಿಕಾರಿ, ಸಹಾಯಕ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇದ್ದರು.

ಮಾಹಿತಿ ಶಿಕ್ಷಣ ಮತ್ತು ಸಂವಹನ ಚಟುವಟಿಕೆಗಳ ಅಡಿ ವಿವಿಧ 7 ರೀತಿಯ ಪೋಸ್ಟರ್​ಗಳನ್ನು ಮುದ್ರಿಸಲಾಗಿದೆ. ಗ್ರಾ.ಪಂ. ಕಚೇರಿ, ಪಡಿತರ ವಿತರಣೆ ಕೇಂದ್ರ, ಮಾರುಕಟ್ಟೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಅಂಗನವಾಡಿ, ಕುಡಿಯುವ ನೀರಿನ ಘಟಕ, ಹಾಲು ಸಂಗ್ರಹಣೆ ಕೇಂದ್ರ, ಪಶು ಆಸ್ಪತ್ರೆ, ಸರ್ಕಾರಿ ಶಾಲೆ, ವಸತಿನಿಲಯ, ಗ್ರಂಥಾಲಯ, ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರದರ್ಶಿಸಿ ವ್ಯಾಪಕ ಪ್ರಚಾರ ಮಾಡಲಾಗುತ್ತಿದೆ. | ಡಾ. ಬಿ.ಸಿ. ಸತೀಶ, ಜಿ.ಪಂ. ಸಿಇಒ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net