

ಚಾಮರಾಜನಗರ: ಗ್ರಾಮೀಣ ಕೈಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿಗಳು ಹಾಗೂ ಗುಡಿ ಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ನೀಡಲಾಗುವ ಸೌಲಭ್ಯಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳ ಸರಬರಾಜು ಕಾರ್ಯಕ್ರಮದಡಿ ಪೆಡ್ಲಿಂಗ್ ಹೊಲಿಗೆಯಂತ್ರ ವಿತ್ ಮೋಟಾರ್ ಸುಧಾರಿತ ಉಪಕರಣಗಳ ಸೌಲಭ್ಯ ಪಡೆಯಲು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ, ಬಿಪಿಎಲ್ ಪಡಿತರ ಚೀಟಿ, ಅಂಗವಿಕಲರಿದ್ದಲ್ಲಿ ಅಂಗವಿಕಲ ಪ್ರಮಾಣ ಪತ್ರ, ಕಸುಬು ನಿರ್ವಹಿಸುತ್ತಿರುವ ಬಗ್ಗೆ ಹಾಗೂ ಈ ಹಿಂದೆ ಸರ್ಕಾರಿ ಯೋಜನೆ ಸೌಲಭ್ಯವನ್ನು ಪಡೆದಿರದ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಕಾರಿಗಳಿಂದ ಪಡೆದ ದೃಢೀಕರಣ ಪತ್ರಗಳನ್ನು ಪಿಡಿಎ್ ೈಲ್ ಪಾರ್ಮೆಟ್‌ನಲ್ಲಿ ಸಲ್ಲಿಸಬೇಕು.
ಆಸಕ್ತ ಅಭ್ಯರ್ಥಿಗಳು ಸಂಬಂಧಪಟ್ಟ ಎಲ್ಲ ದಾಖಲೆಗಳೊಂದಿಗೆ ವೆಬ್‌ಸೈಟ್ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕು ಕೈಗಾರಿಕಾ ವಿಸ್ತರಣಾಕಾರಿಗಳು ಹಾಗೂ ನಗರದ ಜಿಲ್ಲಾಡಳಿತ ಭವನದಲ್ಲಿರುವ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.