ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

1669794056501
Published on

ಕೆ.ಆರ್.ಸಾಗರ: ಇಲ್ಲಿನ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿತ್ತು. ಗ್ರಾಪಂ ಅಧ್ಯಕ್ಷ ಕೆ.ನರಸಿಂಹ ಚಾಲನೆ ನೀಡಿದರು.
ಕಬಡ್ಡಿ, ಖೋಖೋ, ವಾಲಿಬಾಲ್, ನಾಡ ಕುಸ್ತಿ ಏರ್ಪಡಿಸಲಾಗಿತ್ತು. ಮೊದಲ ಮೂವರು ವಿಜೇತರಿಗೆ ಬಹುಮಾನ ನೀಡಲಾಗುತ್ತಿದ್ದು, ಪ್ರಥಮ ಸ್ಥಾನ ಗಳಿಸಿದವರು ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟಕ್ಕೆ ಆಯ್ಕೆಯಾಗುತ್ತಾರೆ ಎಂದು ಪಿಡಿಒ ರಫೀಕ್ ಕರ್ಜಗಿ ತಿಳಿಸಿದರು.
ಗ್ರಾಪಂ ಸದಸ್ಯರಾದ ಸಿ.ಮಂಜುನಾಥ್, ನಾಗೇಂದ್ರಕುಮಾರ್, ಮೂರ್ತಿ, ಕೆ.ರಾಜು, ಪಾಪಣ್ಣ, ಸರ್ಕಾರಿ ನೌಕರರ ಸಂಘದ ಕೆ.ಆರ್.ಸಾಗರ ಯೋಜನಾ ಘಟಕ ಅಧ್ಯಕ್ಷ ಶಿವಪ್ಪ, ಗೌರವ ಅಧ್ಯಕ್ಷ ಜಗನ್ನಾಥ್, ರಾಜ್ಯ ಪರಿಷತ್ ಸದಸ್ಯ ರಾಮಪ್ರಸಾದ್, ದೈಹಿಕ ಶಿಕ್ಷಣ ಶಿಕ್ಷಕ ಮರಿಸ್ವಾಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net