ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್​ಪಾಸ್​ಗಾಗಿ ಅರ್ಜಿ

Adarsha Shakshaka Prashasti Application
Published on

ಬೆಳಗಾವಿ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್​ಪಾಸ್​ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪತ್ರಕರ್ತರು ಗ್ರಾಮ ಒನ್​, ಕರ್ನಾಟಕ ಒನ್​ ಅಥವಾ ಬೆಂಗಳೂರು ಒನ್​ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಅಪ್​ಲೋಡ್​ ಮಾಡಿದ ದಾಖಲೆಗಳು ಹಾಗೂ ಆನ್​ಲೈನ್​ ಅರ್ಜಿ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net