ಗ್ರಾಮೀಣ ಪ್ರದೇಶದಲ್ಲಿ ಗುಣಾತ್ಮಕ ಶಿಕ್ಷಣ

18blk3
 ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಜೆಇಇ ಮೇನ್ಸ್ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶ್ರೀ ಗುರುಬಸವ ಪಟ್ಟದ್ದೇವರು, ಮೋಹನ ಮಹಾರಾಜ, ಸಂಸದ ಸಾಗರ ಖಂಡ್ರೆ, ಶಶಿಧರ ಕೋಸಂಬೆ, ಹಣಮಂತರಾವ ಚವ್ಹಾಣ್, ಬಸವರಾಜ ಮೊಳಕೀರೆ, ವೈಜಿನಾಥ ತಗಾರೆ, ಸಿದ್ರಾಮ ಗೊಗ್ಗಾ ಇತರರಿದ್ದರು.
Published on

ಭಾಲ್ಕಿ: ಗಡಿಭಾಗದ ಗ್ರಾಮೀಣ ಪ್ರದೇಶದಲ್ಲಿ ಗುಣಾತ್ಮಕ ಶಿಕ್ಷಣ ಮತ್ತು ಉತ್ತಮ ಸಂಸ್ಕಾರ ಸಿಗುತ್ತಿರುವುದು ಹೆಮ್ಮೆ ತರಿಸಿದೆ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.

ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್​  ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಮಾರಂಭದಲ್ಲಿ ಜೆಇಇ ಮೇನ್ಸ್ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು, ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಭವಿಷ್ಯದ ದೃಷ್ಟಿಯಿಂದ ತಂದೆ-ತಾಯಿಂದಿರು ದೊಡ್ಡ ನಗರ ಪ್ರದೇಶಗಳಲ್ಲಿ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳನ್ನು ಶಿಕ್ಷಣ ಕೊಡಿಸಲು ಮುಂದಾಗುತ್ತಿದ್ದರು. ಆದರೆ ಇದೀಗ ಕಾಲ ಬದಲಾಗಿದೆ. ನಾಡೋಜ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರ ದೂರದೃಷ್ಟಿ ಮತ್ತು ಪರಿಶ್ರಮದಿಂದ ಗ್ರಾಮೀಣ ಭಾಗದಲ್ಲಿ ಗಡಿಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಹಿರೇಮಠ ಸಂಸ್ಥಾನದ ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿದ್ದರು. ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿದರು.

ಮೋಹನ ಮಹಾರಾಜ, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಣಮಂತರಾವ ಚವ್ಹಾಣ್, ಸಂಸ್ಥೆಯ ನಿರ್ದೇಶಕ ಶಶಿಧರ ಕೋಸಂಬೆ, ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ಪ್ರಶಾಂತ ಸಿರಿಗೇರೆ, ವೈಜಿನಾಥ ತಗಾರೆ, ಸಂತೋಷ ದೇವಕಾರ, ನಿಖಿಲ ತಾಕಭಾತೇ, ಅಭಿನಯ ಆಡಣೆ, ಅಭಿಷೇಕ ಭಾಗವತೆ, ಗಣೇಶ ದೌಂಡ, ಜ್ಞಾನೇಶ್ವರ ತೌರ ಇತರರಿದ್ದರು. ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ ವಂದಿಸಿದರು.

ಹರ್ಡೇಕರ್​ ಮಂಜಪ್ಪ ಜಯಂತಿ: ಇದೇ ವೇಳೆ ಶರಣ ಹರ್ಡೇಕರ್​ ಮಂಜಪ್ಪನವರ ಜಯಂತಿ ಆಚರಿಸಲಾಯಿತು. ಪೀಠಾಧಿಪತಿ ಶ್ರೀ ಗುರುಬಸವ ಪಟ್ಟದ್ದೇವರು ಹರ್ಡೇಕರ ಮಂಜಪ್ಪನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಸವಣ್ಣನವರ ತತ್ವಗನ್ನು ಜಾಗತಿಕ ಮಟ್ಟದಲ್ಲಿ ತಲುಪಿಸುವಲ್ಲಿ ಮಂಜಪ್ಪನವರ ಕೊಡುಗೆ ದೊಡ್ಡದು, ಮೊಟ್ಟ ಮೊದಲ ಬಾರಿಗೆ ೧೯೧೩ರಲ್ಲಿ ದಾವಣಗೆರೆಯಲ್ಲಿ ಬಸವ ಜಯಂತಿ ಆಚರಣೆಗೆ ತಂದ ಶ್ರೇಯಸ್ಸು ಹರ್ಡೇಕರ್ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net