ಗ್ರಾಮೀಣ ಭಾಗಕ್ಕೆ ಮೂಲಸೌಲಭ್ಯ ಒದಗಿಸುವೆ

17gkl1
Published on

ಗುರುಮಠಕಲ್: ತಾಲೂಕಿನ ಗ್ರಾಮೀಣ ಭಾಗಕ್ಕೆ ಮೂಲಸೌಲಭ್ಯ ಒದಗಿಸಲು ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಶರಣಗೌಡ ಕಂದಕೂರ ಹೇಳಿದರು.

ಮಾಧ್ವಾರ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯಿಂದ ೪ ಕೋಟಿ ರೂ. ವೆಚ್ಚದ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಮಾತನಾಡಿದ ಅವರು, ನಮ್ಮ ಅಭಿವೃದ್ಧಿ ಕಾರ್ಯಗಳಿಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಅನುದಾನ ಬಿಟ್ಟರೆ ಬೇರೆ ಏನು ಇಲ್ಲ. ಹೀಗಾಗಿ ಸರ್ಕಾರದಿಂದ ಅನುದಾನ ಲಭ್ಯದಂತೆ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಹಿಂದೆಯೂ ಕರಿಬೆಟ್ಟ-ನಸಲವಾಯಿ ರಸ್ತೆಗೆ ೩೮ ಕೋಟಿ ನೀಡಲಾಗಿದೆ. ಜನರ ಬೇಡಿಕೆ ಹೆಚ್ಚಿರುವುದರಿಂದ ರಸ್ತೆಗೆ ೫೦ ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಹೇಳಿದರು.

ನೀರಿನ ಸಮಗ್ರ ಸಮಸ್ಯೆಯ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆಯಾಗಿದ್ದು,ಪಟ್ಟಣದ ರಸ್ತೆ ಮೂಲ ಸೌಕರ್ಯ ಆಗಿದೆ. ಇನ್ನು ಗ್ರಾಮೀಣ ಪ್ರದೇಶದ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಅನುದಾನ ಬಳಸಿ ಅಭಿವೃದ್ಧಿ ಪಡಿಸಲಾಗುವುದು. ತಾಲೂಕಿನ ಅಭಿವೃದ್ದಿಗೆ ಎಲ್ಲ ಅಧಿಕಾರಿಗಳು ಸಹಕಾರ ನೀಡುತ್ತಿದ್ದು, ಇದೇ ಸಹಕಾರದೊಂದಿಗೆ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲಾಗುವುದು ಎಂದರು. ಯಾದಗಿರಿ ಉಪ ವಿಭಾಗ ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರಶುರಾಮ ಪ್ರಾಸ್ತಾವಿಕವಾಗಿ ಮಾತನಾಡಿದರು.

ಮಾಧ್ವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಕ್ರಪ್ಪ, ತಾಪಂ ಅಧಿಕಾರಿ ಅಂಬ್ರೇಷÀ ಪಾಟೀಲ್, ಜೆಡಿಎಸ್ ಜಿಲ್ಲಾಧ್ಯಕ್ಷ ಶುಭಾಷ ಕಟಕಟೆ, ಜೆಸ್ಕಾಂ ಅಧಿಕಾರಿ ರಾಠೋಡ, ಸೈದಾಪುರ ಪಿಐ ವಿನಾಯಕ, ಗುತ್ತಿಗೆದಾರ, ಚಿದಾನಂದಪ್ಪ ಕಾಳಬೆಳಗುಂದಿ, ಮಲ್ಲಿಕಾರ್ಜುನ ಅರುಣಿ, ರಾಘವೇಂದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net