

ಚಿತ್ರದುರ್ಗ: ಆರೋಗ್ಯ ತಪಾಸಣೆ ಶಿಬಿರಗಳ ಮೂಲಕ ಗ್ರಾಮೀಣರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ. ರವೀಂದ್ರ ಹೇಳಿದರು.
ನಿಸರ್ಗ ಚಾರಿಟಬಲ್ ಟ್ರಸ್ಟ್, ಆರೋಗ್ಯ ಇಲಾಖೆ ಹಾಗೂ ಜಿಲ್ಲಾಸ್ಪತ್ರೆ ಆಶ್ರಯದಲ್ಲಿ ಗುಡ್ಡದ ರಂಗವ್ವನಹಳ್ಳಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಬದಲಾದ ಆಹಾರ ಪದ್ಧತಿ ಹಾಗೂ ಒತ್ತಡದ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿಯ ಆರೋಗ್ಯ ಸಮಸ್ಯೆಗಳಿಂದ ಬಳಲುವುದು ಸಹಜ. ಎಲ್ಲರೂ ಜಿಲ್ಲಾಸ್ಪತ್ರೆ, ಹೈಟೆಕ್ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯುವುದು ಕಷ್ಟವಾಗಿರುವುದರಿಂದ, ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದರು.
ತಾಲೂಕು ವೈದ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಮಾತನಾಡಿದರು. ನಿಸರ್ಗ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ದುರುಗೇಶ್, ಕಾರ‌್ಯದರ್ಶಿ ನಾಗರಾಜ್, ಪದಾಧಿಕಾರಿಗಳಾದ ಶ್ರೀನಾಥ್, ಶಶಿಕುಮಾರ್, ರಾಘವೇಂದ್ರ, ಮನು, ವೈದ್ಯರಾದ ಡಾ.ಗೀತಾಂಜಲಿ, ಡಾ.ವಾಣಿ, ಡಾ. ಪ್ರಜ್ವಲ್, ಗ್ರಾಪಂ ಕಾರ‌್ಯದರ್ಶಿ ತುರುವೇಶ್ ಇದ್ದರು.