

ಕೊಳ್ಳೇಗಾಲ: ಪಟ್ಟಣದ ಲಯನ್ಸ್ ಕ್ಲಬ್ ವತಿಯಿಂದ ಭಾನುವಾರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಹಿರಿಯ ಸಿವಿಲ್ ನ್ಯಾಯಾಧೀಶೆ ಸುನಿತಾ ಮಾತನಾಡಿ, ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ವಿದ್ಯಾಭ್ಯಾಸಕ್ಕೆ ಇನ್ನು ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯೆಯಿಂದ ಜ್ಞಾನ ದೊರೆಯುತ್ತದೆ. ಇದರಿಂದ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಬಹುದು ಎಂದರು.
ಮಹಿಳೆಯರ ಮೇಲೆ ನಿರಂತರವಾಗಿ ಹಾಗೂ ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿದೆ. ಅಂತೆಯೇ, ತಪ್ಪಿತಸ್ಥರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆ ಆಗುತ್ತಿದೆ. ದೌರ್ಜನ್ಯ ತಡೆಗಟ್ಟುವಲ್ಲಿ ಸಮಾಜದ ಹೊಣೆಗಾರಿಕೆ ಹೆಚ್ಚಿರುತ್ತದೆ ಎಂದರು.
ಲಯನ್ ಕ್ಲಬ್ ಅಧ್ಯಕ್ಷ ಚಿಕ್ಕಬಸವಯ್ಯ, ನಿಕಟಪೂರ್ವ ಅಧ್ಯಕ್ಷ ಲಯನ್ ವೆಂಕಟೇಶ್ ಬಾಬು, ಮಾಜಿ ಅಧ್ಯಕ್ಷ ಸಲಯನ್ ಎಸ್.ನಾಗರಾಜು ಕೊಂಗರಹಳ್ಳಿ, ಕಾರ್ಯದರ್ಶಿ ಇಂದ್ರೇಶ್, ಖಜಾಂಚಿ ವಿರೂಪಾಕ್ಷ ಸ್ವಾಮಿ, ಲಯನ್ ಚೆನ್ನ ಮಾದೇಗೌಡ ಮತ್ತಿತರರಿದ್ದರು.