ಗ್ರಾಮೀಣರಿಗಾಗಿ ಕ್ರೀಡಾಕೂಟ ಆಯೋಜನೆ

27 yelandur 01
ಯಳಂದೂರು ಸಮೀಪದ ಇರಸವಾಡಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳು ಜನಪ್ರತಿನಿಧಿಗಳಿಗೆ ತಮ್ಮ ಪರಿಚಯ ಮಾಡಿಕೊಂಡರು.
Published on

ಯಳಂದೂರು: ಗ್ರಾಮೀಣ ಭಾಗದಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತಿದೆ ಎಂದು ಇರಸವಾಡಿ ಗ್ರಾಪಂ ಪಿಡಿಒ ನಾಗರಾಜು ತಿಳಿಸಿದರು.

ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ಗ್ರಾಮೀಣ ಕ್ರೀಡಾಕೂಟದಲ್ಲಿ ಮಾತನಾಡಿ, ಗ್ರಾಮೀಣರಲ್ಲಿ ಕ್ರೀಡಾಸಕ್ತಿ ಹೆಚ್ಚಾಗಿರುತ್ತದೆ. ಆದರೆ, ಅವರಿಗೆ ಸೂಕ್ತ ವೇದಿಕೆ ಸಿಗುತ್ತಿಲ್ಲ. ಈ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ವಾಲಿಬಾಲ್ ಹಾಗೂ ಕಬಡ್ಡಿ ಪಂದ್ಯಾವಳಿ ಆಯೋಜನೆ ಮಾಡಲಾಗಿದೆ ಎಂದರು.

ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಮಹಿಳಾ ಹಾಗೂ ಪುರುಷ ಕ್ರೀಡಾಪಟುಗಳಿಗೆ ಆಡಲು ಅವಕಾಶವಿದ್ದು, ಇಲ್ಲಿ ಗೆದ್ದವರಿಗೆ ಬಹುಮಾನ ನೀಡಲಾಗುತ್ತದೆ. ಇದರೊಂದಿಗೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರು ವೈಯಕ್ತಿಕವಾಗಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ಇಲ್ಲಿ ಗೆದ್ದವರು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಉತ್ತಮ ಸಾಧನೆ ತೋರಲು ಇದು ವೇದಿಕೆಯಾಗಲಿದೆ ಎಂದರು.

ಪಂಚಾಯಿತಿ ಉಪಾಧ್ಯಕ್ಷೆ ಚಂದ್ರಮ್ಮ, ಸದಸ್ಯರಾದ ರಂಗಸ್ವಾಮಿ, ಗೋವಿಂದಶೆಟ್ಟಿ, ಸುರೇಶ್, ರಾಮಚಂದ್ರು, ಮಹದೇವಶೆಟ್ಟಿ, ಎಸ್. ನಾಗರಾಜು, ಕಾರ್ಯದರ್ಶಿ ಬಲ್ಲಶೆಟ್ಟಿ ಶಾಲೆಯ ಮುಖ್ಯ ಶಿಕ್ಷಕ ರಾಚಪ್ಪಾಜಿ ದೈಹಿಕ ಶಿಕ್ಷಕರಾದ ನಾಗೇಂದ್ರ ಮೋಹನ್ ಮುಖಂಡ ಜನಾರ್ಧನ್, ಜಾನಿ ಹಾಜರಿದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net