

ಶಿಡ್ಲಘಟ್ಟ: ಗ್ರಾಮೀಣ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಮುಖ್ಯವಾದುದು ಎಂದು ಚಿಂತಾಮಣಿ ಮಹಿಳಾ ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್.ರು ಹೇಳಿದರು.
ಧರ್ಮಸ್ಥಳ ಗ್ರಾವಾಭಿವೃದ್ಧಿ ಸಂಘದ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜ್ಞಾನ ವಿಕಾಸ ಕಾರ್ಯಕ್ರಮದ ಸೇವಾ ಪ್ರತಿನಿಧಿಗಳ ಸಭೆಯಲ್ಲಿ ವಾತನಾಡಿ, ಗ್ರಾಮಗಳ ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಗ್ರಾಮೀಣ ಭಾಗದ ಹಲವು ಕೈಗಾರಿಕೆಗಳು, ಹೈನುಗಾರಿಕೆ ಹಾಗೂ ಕೃಷಿ ಆಧಾರಿತ ಕಸುಬುಗಳಲ್ಲಿ ಮಹಿಳೆ ಪ್ರಧಾನ ವ್ಯಕ್ತಿ. ಇಂದು ಅವರು ಎಲ್ಲ ಕ್ಷೇತ್ರಗಳಲ್ಲಿಯೂ ಛಾಪು ಮೂಡಿಸುತ್ತಿದ್ದಾರೆ ಎಂದರು.
ಮಹಿಳೆಯರ ಆರೋಗ್ಯ ಮತ್ತು ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ನಾಲ್ಕು ಗೋಡೆಗಳ ಮಧ್ಯೆ ಬದುಕುತ್ತಿದ್ದ ಮಹಿಳೆ ನಿಧಾನವಾಗಿ ಸವಾಜದ ಮುಖ್ಯವಾಹಿನಿಗೆ ಬರುತ್ತಿದ್ದಾಳೆ. ಇಂತಹ ಮಹಿಳೆಯರನ್ನು ಪ್ರೋತ್ಸಾಹಿಸಬೇಕಿದೆ. ಗ್ರಾಮೀಣ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಂಘದ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಆರೋಗ್ಯ, ಶಿಕ್ಷಣ, ವ್ಯಕ್ತಿತ್ವ ವಿಕಸನ, ಸಾವಾಜಿಕ ಸಂಬಂಧಗಳು, ಆರ್ಥಿಕ ಚಟುವಟಿಕೆಗಳ ನಿರ್ವಹಣೆ ಇನ್ನಿತರ ವಿಚಾರಗಳನ್ನು ತಿಳಿಸಲಾಗುತ್ತಿದೆ ಎಂದು ತಿಳಿಸಿದರು.
ಸರಸ್ವತಿ ವಿದ್ಯಾಸಂಸ್ಥೆಗಳ ಅಧ್ಯಕ್ಷ ಶ್ರೀಕಾಂತ್ ವಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಲಕ್ಷಾಂತರ ಜನರಿಗೆ ಉದ್ಯೋಗ ಕಲ್ಪಿಸಿ ಆರ್ಥಿಕ ಪ್ರಗತಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಜಿಲ್ಲಾ ಕಸಾಪ ವಾಜಿ ಅಧ್ಯಕ್ಷ ಎಸ್.ವಿ.ನಾಗರಾಜರಾವ್ ವಾತನಾಡಿ, ಸವಾಜದಲ್ಲಿನ ಶಾಂತಿ, ಸಂಸ್ಕಾರ, ತ್ಯಾಗ ಮತ್ತು ಸಹನೆಯ ಪ್ರತಿರೂಪವೆ ಮಹಿಳೆ. ಆರೋಗ್ಯವಂತ ಮಹಿಳೆಯಿಂದ ಆರೋಗ್ಯವಂತ ಸವಾಜ ನಿರ್ವಾಣ ಸಾಧ್ಯ ಎಂದು ಸಲಹೆ ನೀಡಿದರು.
ಜ್ಞಾನ ವಿಕಾಸದ ತಾಲೂಕು ಸಮನ್ವಯಾಧಿಕಾರಿ ಲಕ್ಷ್ಮೀ, ಆಡಳಿತ ಪ್ರಬಂಧಕಿ ಚೈತ್ರಾ ಮತ್ತು ಜ್ಞಾನ ವಿಕಾಸ ಸಂಯೋಜಕಿಯರು ಇದ್ದರು.