ಗ್ರೂಪ್ ಬಿ ಹುದ್ದೆ ಪರೀಕ್ಷೆ ಸುಸೂತ್ರ ನಡೆಸಿ

2202Klb11
Published on

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಯ ಗ್ರೂಪ್ ಬಿ ಹುz್ದೆಗಳ ನೇಮಕಕ್ಕೆ ಫೆ.೨೩ರಿಂದ ೨೮ರವರೆಗೆ ನಗರದ ೩೫ ಪರೀಕ್ಷಾ ಕೇಂದ್ರಗಳಲ್ಲಿ ಸ್ಫರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಕಪ್ಪು ಚುಕ್ಕೆ ಇಲ್ಲದೆ ಪಾರದರ್ಶಕವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿ¯್ಲÁಧಿಕಾರಿ ಬಿ.ಫೌಜಿಯಾ ತರನ್ನುಮ್ ಸೂಚನೆ ನೀಡಿದರು.

ಡಿ.ಸಿ.ಕಚೇರಿ ಸಭಾಂಗಣದಲ್ಲಿ ಶನಿವಾರ ಪರೀಕ್ಷಾ ಕೇಂದ್ರ ಮುಖ್ಯಸ್ಥರು, ಮಾರ್ಗಾಧಿಕಾರಿಗಳು, ವೀP್ಷÀಕರೊಂದಿಗೆ ಪೂರ್ವಸಿದ್ಧತೆ ಸಭೆ ನಡೆಸಿ, ನಕಲಿಗೆ ಅವಕಾಶ ಇರಬಾರದು. ಕಂಡು ಬಂದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಫೆ.೨೩ರಂದು ನಡೆಯುವ ಪರೀಕ್ಷೆಗೆ ೩೫ ಪರೀಕ್ಷಾ ಕೇಂದ್ರದಲ್ಲಿ ೧೧,೫೩೫ ಅಭ್ಯರ್ಥಿ ಹಾಜರಾಗಲಿz್ದÁರೆ. ಫೆ.೨೪, ೨೫ ಹಾಗೂ ೨೭ ರಂದು ನಿತ್ಯ ೧೨ ಕೇಂದ್ರದಲ್ಲಿ ೩,೭೪೫ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸ್ಥಳೀಯ ನಿರೀಕ್ಷಣಾಧಿಕಾರಿ, ಮಾರ್ಗಾಧಿಕಾರಿಗಳು, ವೀಕ್ಷಕರನ್ನು ನೇಮಿಸಲಾಗಿದೆ. ಪರೀಕ್ಷೆಗೆ ಮುನ್ನ ಕೇಂದ್ರದಲ್ಲಿ ಮೂಲಸೌಲಭ್ಯವನ್ನು ಮುಖ್ಯಸ್ಥರು ಖಾತ್ರಿಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿ ತಪಾಸಣೆಗೆ ಪುರುಷ ಮತ್ತು ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ನಿರ್ದೇಶಿಸಿದರು.

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಸೇರಿ ಎಲ್ಲ ಎಲೆಕ್ಟಾçನಿಕ್ ಸಾಧನೆ ಬಳಕೆ ನಿಷೇಧಿಸಿದ್ದು, ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ. ವೆಬ್‌ಕಾಸ್ಟಿಂಗ್ ಮೂಲಕ ಮೇಲ್ವಿಚಾರಣೆ ಇದೆ. ಪ್ರವೇಶ ಪತ್ರದಲ್ಲಿದ್ದಂತೆ ಡ್ರೆಸ್ ಕೋಡ್ ಪಾಲಿಸಬೇಕು ಎಂದು ತಿಳಿಸಿದರು.

ಜಿಪಂ ಸಿಇಓ ಭಂವರ್‌ಸಿAಗ್ ಮೀನಾ, ಎಸ್.ಪಿ.ಅಡ್ಡೂರು ಶ್ರೀನಿವಾಸುಲು, ಅಪರ ಜಿ¯್ಲÁಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಡಿಡಿಪಿಐ ಸೂರ್ಯಕಾಂತ ಮದಾನೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net