ಗ್ರ್ಯಾಚುಟಿ ಇತರೆ ಸೌಲಭ್ಯಕ್ಕೆ ಆಗ್ರಹ ಬೀದಿಗಿಳಿದ ಅಂಗನವಾಡಿ ಕಾರ್ಯಕರ್ತೆಯರು
Published on:
Copied
Follow Us
ದಾವಣಗೆರೆ: ಸುಪ್ರೀಂಕೋರ್ಟ್ ಆದೇಶದಂತೆ ಗ್ರ್ಯಾಚುಟಿ ಸೌಲಭ್ಯ ಒದಗಿಸಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ನೇತೃತ್ವದಲ್ಲಿ ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
ಸೇವಾ ಭದ್ರತೆ, ಕನಿಷ್ಠ ವೇತನವಿಲ್ಲದೇ ಅಂಗನವಾಡಿ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಪಿಂಚಣಿ, ಭವಿಷ್ಯನಿಧಿ, ಗ್ರಾೃಚುಟಿ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ವಿವಿಧ ಹಂತದ ಹೋರಾಟ ನಡೆಸಿದರೂ ಸರ್ಕಾರಗಳು ಗಮನಹರಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಬೇಕು. ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರು ಎಂದು ಪರಿಗಣಿಸಬೇಕು, ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ನೀಡಬೇಕು. ಅಂಗನವಾಡಿಯಿಂದ ಬೇರೆ ಶಾಲೆಗೆ ಹೋಗುವಾಗ ವರ್ಗಾವಣೆ ಪತ್ರ ಕೊಡುವ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷೆ ಎಂ.ಬಿ. ಶಾರದಮ್ಮ, ಆವರಗೆರೆ ವಾಸು, ವಿಶಾಲಾಕ್ಷಿ ಮೃತ್ಯುಂಜಯ, ಎಸ್.ಎಸ್. ಮಲ್ಲಮ್ಮ, ಕೆ. ಸುಧಾ, ಜಿ.ರೇಣುಕಮ್ಮ, ಎಂ.ಸರ್ವಮ್ಮ, ಕಾಳಮ್ಮ, ಆವರಗೆರೆ ಚಂದ್ರು ಪ್ರತಿಭಟನೆಯಲ್ಲಿದ್ದರು.