

ಯಾದಗಿರಿ: ಸಾರ್ವಜನಿಕ ಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ, ಜಿಲ್ಲೆಯ ಎಲ್ಲ ನಗರ ಮತ್ತು ಪಟ್ಟಣಗಳ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಂಬಂಸಿದ ಅಕಾರಿಗಳಿಗೆ ಜಿಲ್ಲಾಕಾರಿ ಡಾ.ಸುಶೀಲಾ ಬಿ., ನಿದರ್ೇಶನ ನೀಡಿದರು.
ಶುಕ್ರವಾರ ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿ, ವೈಜ್ಞಾನಿಕ ಘನತ್ಯಾಜ್ಯ ನಿರ್ವಹಣೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು. ಸಕಾಲ ಯೋಜನೆಯಡಿ ನಗರ ಸ್ಥಳೀಯ ಸಂಸ್ಥೆಗಳಿಗೆ ಸ್ವೀಕೃತವಾಗುವ ಅಜರ್ಿಗಳನ್ನು ನಿಗದಿತ ಕಾಲಾವಯಲ್ಲಿ ವಿಲೇಮಾರಿ ಮಾಡಬೇಕು ಎಂದು ಸೂಚಿಸಿದರು.
ನಗರೋತ್ಥಾನ ಹಂತ-3 ಮತ್ತು 4 ಯೋಜನೆಯ ಕಾಮಗಾರಿಗಳನ್ನು ನಿಗದಿತ ಅವಯಲ್ಲಿ ಪೂರ್ಣಗೊಳಿಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಸಂಬಂಸಿದ ಅಕಾರಿಗಳು ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಬೇಕು. ಈ ಯೋಜನೆಯಡಿ ವ್ಯಯಕ್ತಿಕ ಕಾರ್ಯಕ್ರಮಗಳ ಕುರಿತು ಫಲಾನುಭವಿಗಳ ಪಟ್ಟಿಯನ್ನು ನಿಯಮಾನುಸಾರ ತಯಾರಿಸಿ ಸಲ್ಲಿಸಬೇಕು ಎಂದರು.
ನಗರದ ವ್ಯಾಪ್ತಿಯಲ್ಲಿ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಸಮರ್ಪಕ ಘನತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ಕೊಡಬೇಕು. ಸಾರ್ವಜನಿಕರು ಮನೆಯಲ್ಲಿ ಹಸಿ ಕಸ-ಒಣ ಕಸವನ್ನು ಬೇರ್ಪಡಿಸಬೇಕು. ಎಲ್ಲೆಂದರಲ್ಲಿ ಕಸ ಎಸೆಯುವ ಬದಲು ನಗರಸಭೆಯ ಕಸದ ವಾಹನಗಳಲ್ಲಿ ಹಾಕಬೇಕು. ನಗರ ಸ್ಥಳೀಯ ಸಂಸ್ಥೆಗಳು ಕರಪತ್ರ, ಭಿತ್ತಿಪತ್ರ, ಜಾಗೃತಿ ಜಾಥಾ, ಡಂಗೂರ ಸಾರಿಸುವ ಮೂಲಕ ನೈರ್ಮಲ್ಯ ಕಾಪಾಡುವ ಬಗ್ಗೆ ತಿಳಿವಳಿಕೆ ಮೂಡಿಸಬೇಕು ಎಂದು ಹೇಳಿದರು.
ನಗರ ಸ್ಥಳೀಯ ಸಂಸ್ಥೆಗಳ ನಗರೋತ್ಥಾನ ಯೋಜನೆ, ಘನತ್ಯಾಜ್ಯ ನಿರ್ವಹಣೆ, 24/7 ಕುಡಿಯುವ ನೀರು ಸರಬರಾಜು, ಯುಜಿಡಿ ಸೇರಿ ವಿವಿಧ ಯೋಜನೆಗಳ ಪ್ರಸ್ತುತ ಸ್ಥಿತಿಗತಿ ವರದಿಗಳ ಕುರಿತು ಮಾಹಿತಿ ಪಡೆದ ಜಿಲ್ಲಾಕಾರಿಗಳು ಹಲವು ಸಲಹೆಗಳನ್ನು ನೀಡಿದರು.
ಪ್ರಭಾರಿ ಪೌರಾಯುಕ್ತ ಡಾ.ಹಂಪಣ್ಣ ಸಜ್ಜನ್, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಲಕ್ಷ್ಮೀಕಾಂತ, ಕಾರ್ಯಪಾಲಕ ಅಭಿಯಂತರ ಮಹೇಶ್ವರ ಸುಲೆಗಾವ್, ವಿವಿಧ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಕಾರಿಗಳು ಹಾಗೂ ಅಭಿಯಂತರರು ಇದ್ದರು.