ಚಂದ್ರಗುತ್ತಿಯಲ್ಲಿ ಅದ್ದೂರಿ ದಸರೆಗೆ ವೇದಿಕೆ; ಈಗಾಗಲೇ ಸಮಿತಿ ರಚನೆ, ಸರ್ಕಾರದಿಂದಲೇ ಅನುದಾನ: ಕುಮಾರ್ ಬಂಗಾರಪ್ಪ

SOR WEB
Published on

ಸೊರಬ: ದಸರಾ ಉತ್ಸವವನ್ನು ಪುರಾಣ ಪ್ರಸಿದ್ಧ ಚಂದ್ರಗುತ್ತಿ ಹಾಗೂ ಸೊರಬದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಆವರಣದಲ್ಲಿ ಸಾರ್ವಜನಿಕರು ಹಾಗೂ ಸರ್ಕಾರದ ಸಹಭಾಗಿತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಕುಮಾರ್ ಬಂಗಾರಪ್ಪ ಹೇಳಿದರು.

ತಾಲೂಕು ಕಚೇರಿಯಲ್ಲಿ ದಸರಾ ಉತ್ಸವದ ಆಚರಣೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಂದ್ರಗುತ್ತಿಯಲ್ಲಿ ಒಂಬತ್ತು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನವರಾತ್ರಿ ಆಚರಿಸಲಾಗುತ್ತದೆ. ಈಗಾಗಲೇ ಸಮಿತಿ ರಚಿಸಲಾಗಿದೆ. ನವರಾತ್ರಿ ಉತ್ಸವಕ್ಕೆ ಕಳೆದ ಸರ್ಕಾರ ಬಾರಿ 8.78 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿತ್ತು. ಈ ಬಾರಿ 13 ಲಕ್ಷ ರೂ. ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಪಟ್ಟಣದ ರಂಗನಾಥ ಸ್ವಾಮಿ ದೇವಾಲಯದ ಆವರಣದಲ್ಲಿ ಕೂಡ ಪ್ರತಿ ವರ್ಷದಂತೆ ಈ ಬಾರಿಯೂ ಉತ್ಸವವನ್ನು ಹಮ್ಮಿಕೊಳ್ಳಲಾಗುವುದು. ಇದಕ್ಕೆ ಸರ್ಕಾರ ಯಾವುದೇ ಅನುದಾನ ನೀಡುವುದಿಲ್ಲ. ದೇವಸ್ಥಾನದ ಆಡಳಿತ ಸಮಿತಿ ಹಾಗೂ ದಸರಾ ಸಮಿತಿಯವರು ಒಟ್ಟಾಗಿ ದಸರಾ ಹಬ್ಬವನ್ನು ಆಚರಿಸುವಂತೆ ನೋಡಿಕೊಳ್ಳಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net