ಚಿತ್ರದುರ್ಗ: ಚಾಂದ್ರಮಾನ ಯುಗಾದಿ ಹಬ್ಬದ ಅಂಗವಾಗಿ ನಗರದ ಶಕ್ತಿದೇವತೆ ಬರಗೇರಮ್ಮ ದೇವಿ ಮೂರ್ತಿಯನ್ನು ವಿವಿಧ ಬಗೆಯ ಪುಷ್ಪಗಳಿಂದ ಚಂದ್ರನಾಕಾರದಲ್ಲಿ ಬುಧವಾರ ವಿಶೇಷವಾಗಿ ಅಲಂಕರಿಸಲಾಗಿತ್ತು.
ಚಂದ್ರ ದರ್ಶನದ ಬಳಿಕ ಸಾವಿರಾರು ಭಕ್ತರು ದೇಗುಲಕ್ಕೆ ಭೇಟಿ ನೀಡಿ ದೇವಿಯ ಅಲಂಕಾರ ಕಣ್ತುಂಬಿಕೊಂಡರು. ಇಷ್ಟಾರ್ಥ ಈಡೇರಿಸುವಂತೆ ಪ್ರಾರ್ಥಿಸಿಕೊಂಡರು.