ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಶಾಸಕ, ಡಿ.ಸಿ. ಭೇಟಿ

mla mahesh visit
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

ಉಣಕಲ್ಲ್​ನಲ್ಲಿರುವ ಪುರಾತನವಾದ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನಕ್ಕೆ ಶಾಸಕ ಮಹೇಶ ಟೆಂಗಿನಕಾಯಿ ಹಾಗೂ ಜಿಲ್ಲಾಧಿಕಾರಿ ದಿವ್ಯ ಪ್ರಭು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಿಂದಿನ ವಿಧಾನಸಭೆ ಅಧಿವೇಶನದಲ್ಲಿ ಹುಬ್ಬಳ್ಳಿ-ಧಾರವಾಡ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಚರ್ಚೆಯ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ಉಣಕಲ್ಲ್​ನ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಹೆಸರನ್ನು ಪ್ರಸ್ತಾಪಿಸಿದ್ದರು.

ಬೆಂಗಳೂರಿನಲ್ಲಿ ಪ್ರತಿ ಗುರುವಾರ ನಡೆಯುವ ವಿಧಾನಸಭೆ ಕಮಿಟಿಗಳ ಸಭೆಯಲ್ಲಿ ಈ ವಾರ (ಫೆ. 6ರಂದು) ಚಂದ್ರಮೌಳೇಶ್ವರ ದೇವಸ್ಥಾನದ ವಿಷಯವು ಚರ್ಚೆಗೆ ಬರಲಿದೆ. ಈ ಹಿನ್ನೆಲೆಯಲ್ಲಿ ಶಾಸಕ, ಜಿಲ್ಲಾಧಿಕಾರಿ ಮತ್ತು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳ ಭೇಟಿಯು ಮಹತ್ವ ಪಡೆದುಕೊಂಡಿದೆ. ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net