

ಹಾಸನ: ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ನಗರ ಸೇರಿದಂತೆ ತಾಲೂಕಿನ ವಿವಿಧೆಡೆ ಸಂಭ್ರಮಾಚರಿಸಲಾಯಿತು. ಬುಧವಾರ ಸಂಜೆ 6 ಗಂಟೆಗೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಗುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮ ವ್ಯಕ್ತಪಡಿಸಿದರು. ಇದಕ್ಕೂ ಮುನ್ನ ಬುಧವಾರ ಮಧ್ಯಾಹ್ನ ಚಂದ್ರಯಾನ-3 ಯಶಸ್ವಿಯಾಗಲೆಂದು ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದರು. ಸಂಭ್ರಮಾಚರಣೆ ವೇಳೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಅನೂಪ್, ಜಿಲ್ಲಾ ಕಾರ್ಯದರ್ಶಿ ಪ್ರವೀಣ್, ಯುವ ಮೋರ್ಚಾ ಸದಸ್ಯರಾದ ಲಿಖಿತ್, ದರ್ಶನ್, ಸತೀಶ್ ಸೇರಿದಂತೆ ಇತರರು ಇದ್ದರು.
ಇನ್ನು ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯಲ್ಲಿ ಬಿಜೆಪಿ ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು. ಪ್ರಧಾನಿ ಮೋದಿ, ಇಸ್ರೋ ವಿಜ್ಞಾನಿಗಳು ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ಜೈಕಾರ ಹಾಕಿದರು.