ಚಂದ್ರಯಾನ-3 ಯಶಸ್ವಿ; ಪ್ರತಿಯೊಬ್ಬ ದೇಶವಾಸಿಗೂ ಹೆಮ್ಮೆಯ ಕ್ಷಣವೆಂದ ಸಚಿವ ಸತೀಶ ಜಾರಕಿಹೊಳಿ

satish jarkiholi
Published on

ಬೆಳಗಾವಿ: ಚಂದ್ರಯಾನ - 3 ಯಶಸ್ವಿಯಾಗಿದ್ದು, ಪ್ರತಿಯೊಬ್ಬ ದೇಶವಾಸಿಗೂ ಇದೊಂದು ಹೆಮ್ಮೆಯ ಕ್ಷಣವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಸ್ರೋದ ಪರಿಶ್ರಮದಿಂದ ಚಂದ್ರಯಾನ ಯಶಸ್ವಿಯಾಗಿದೆ. ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ. ಚಂದ್ರನ ದಕ್ಷಿಣ ಧೃವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ಬೆರಗುಗಣ್ಣಿನಿಂದ ನೋಡುವಂತೆ ಮಾಡಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net