ಚಂದ್ರವನ ಆಶ್ರಮದಲ್ಲಿ ನವರಾತ್ರಿ ಉತ್ಸವ

Published on

ಶ್ರೀರಂಗಪಟ್ಟಣ: ಚಂದ್ರವನ ಆಶ್ರಮದಲ್ಲಿ ಸೆ.22ರಿಂದ ಅ.3ರವರೆಗೆ ನವರಾತ್ರಿ ಉತ್ಸವ ವಿಜೃಂಭಣೆಯಿಂದ ಜರುಗಲಿದ್ದು, 2025ನೇ ಸಾಲಿನ ರಾಷ್ಟ್ರ ಮಟ್ಟದ ಶ್ರೇಷ್ಠ ಕಾವೇರಿ ಪ್ರಶಸ್ತಿಯನ್ನು ಮೇಘಾಲಯದ ರಾಜ್ಯಪಾಲ ಸಿ.ಎಚ್. ವಿಜಯಶಂಕರ್ ಅವರಿಗೆ ನೀಡಲಾಗುತ್ತಿದೆ ಎಂದು ಶ್ರೀ ಮಠದ ಪೀಠಾಧಿಪತಿ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ ತಿಳಿಸಿದ್ದಾರೆ.

ಪಟ್ಟಣ ಹೊರವಲಯದ ಚಂದ್ರವನ ಆಶ್ರಮದಲ್ಲಿ ನವರಾತ್ರಿ ಆಚರಣೆಗಳು ಈ ಬಾರಿಯೂ ಸಂಪ್ರದಾಯದಂತೆ ನಡೆಯಲಿದೆ. ವಿಜಯದಶಮಿ ಮರುದಿನ ಅ.3ರಂದು ಮಠದ ಆವರಣದಲ್ಲಿ ನಡೆಯುವ ವಿಶೇಷ ವೇದಿಕೆ ಕಾರ್ಯಕ್ರಮದಲ್ಲಿ ಸಿ.ಎಚ್.ವಿಜಯಶಂಕರ್ ಅವರಿಗೆ ಕಾವೇರಿ ಪ್ರಶಸ್ತಿಯನ್ನು ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಪ್ರದಾನ ಮಾಡಲಿದ್ದಾರೆ.

ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ, ಸಂಸದ ಜಗದೀಶ್ ಶೆಟ್ಟರ್ ಸೇರಿದಂತೆ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net