

ಬೀದರ್: ಕೆಎಸ್ಐಐಡಿಸಿ ಅಧ್ಯಕ್ಷ ಡಾ.ಶೈಲೇಂದ್ರ ಬೆಲ್ದಾಳೆ ಕುರಿತು ಕಾಂಗ್ರೆಸ್ ಮುಖಂಡ ಚಂದ್ರಾಸಿಂಗ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಟಿಕೆಟ್ ಕೈತಪ್ಪಿದ ಬಳಿಕ ಚಂದ್ರಾಸಿಂಗ್ ಮಾನಸಿಕ ಸ್ಥಿಮಿತ ಕಳೆದುಕೊಂಡು ಏನೇನೋ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಾಜರಡ್ಡಿ ಶಾಬಾದ್ ಹೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿ, ಜನರ ಹಿತಕ್ಕಾಗಿ ನಿರಂತರ ದುಡಿಯುತ್ತಿರುವ ಬೆಲ್ದಾಳೆ ಅವರ ಬಗ್ಗೆ ಮಾತನಾಡುವ ನೈತಿಕತೆ ಚಂದ್ರಾಸಿಂಗ್ ಅವರಿಗಿಲ್ಲ. ಹೇಳಿಕೆ ಹಿಂಪಡೆದು ಬಹಿರಂಗ ಕ್ಷಮೆ ಕೇಳದಿದ್ದರೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.