ಚಿನ್ನಭರಣ ದೋಚಿದ್ದ ಕಳ್ಳನ ಬಂಧನ

Arrest
Published on

ಮೈಸೂರು; ಕದ್ದ ಚಿನ್ನಾಭರಣವನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ಚಾಮರಾಜನಗರ ತಾಲೂಕಿನ ಸಾಗಡೆ ಗ್ರಾಮದ ಗೋಪಾಲ್(42) ಬಂಧಿತ. ಈತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.


ಮೈಸೂರು ತಾಲೂಕು ಹಾರೋಹಳ್ಳಿ ಬಳಿ ಮಹಿಳೆಯೊಬ್ಬರಿಂದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದನು. ನಗರದ ಜಗನ್ಮೋಹನ ಅರಮನೆ ಬಳಿ ಒಡವೆಗಳನ್ನು ಮಾರಾಟ ಮಾಡಲು ಮುಂದಾಗಿದ್ದನು. ಆರೋಪಿ ವರ್ತನೆಯಿಂದ ಅನುಮಾನಗೊಂಡ ಗಸ್ತಿನಲ್ಲಿದ್ದ ಪೊಲೀಸರು ಹಿಡಿಯಲು ಯತ್ನಿಸಿದರು. ತಕ್ಷಣ ಪರಾರಿಯಾಗಲು ಮುಂದಾದನು. ತ್ವರಿತಗತಿಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಕಳ್ಳತನ ಮಾಡಿರುವುದು ಬಹಿರಂಗವಾಗಿದೆ.


ಚಿನ್ನಾಭರಣ ಮಾರಾಟ ಮಾಡಲು ಬಳಸಿದ್ದ ಬೈಕ್ ಕೂಡ ಕದ್ದ ವಾಹನವಾಗಿದೆ. ಮಂಡ್ಯ ಬಳಿ ದ್ವಿಚಕ್ರ ವಾಹನವನ್ನು ಕಳವು ಮಾಡಿರುವುದಾಗಿ ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾನೆ. ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net