ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರಿಗೆ ಕಿರುಕುಳ;  ನಿಖಿಲ್ ಕುಮಾರಸ್ವಾಮಿ ಆಕ್ರೋಶ|Harassment of JDS workers in Channapatnam; Nikhil Kumaraswamy outraged

nikhil kumarswamy
Published on

ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ನೂತನ ಶಾಸಕ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಕಿರುಕುಳ ನೀಡುತ್ತಿರುವ(Harassment of JDS workers in Channapatnam;  Nikhil Kumaraswamy outraged) ಬಗ್ಗೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ(Nikhil Kumaraswmy) ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ ಪಕ್ಷಗಳ ಕಾರ್ಯಕರ್ತರು ಚನ್ನಪಟ್ಟಣದಲ್ಲಿ ನಮ್ಮ ಮುಖಂಡರಿಗೆ ಕಿರುಕುಳ ನೀಡುವುದು ಅಕ್ಷಮ್ಯ. ಪ್ರಜಾಪ್ರಭುತ್ವದಲ್ಲಿ ಇಂಥ ನಡೆ ಒಳ್ಳೆಯದಲ್ಲ, ಅದನ್ನು ಸಹಿಸುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದಾರೆ.

ಆಡಳಿತ ಯಂತ್ರ ದುರುಪಯೋಗ ಮಾಡಿಕೊಂಡು ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಕೈಕಟ್ಟಿ ಕೂರುವ ಜಾಯಮಾನ ನಮ್ಮದಲ್ಲ. ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ, ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿಯುವ ಯಾವುದೇ ಇಲಾಖೆಯ ಅಧಿಕಾರಿಗಳು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದುು ಕಿಡಿಕಾರಿದ್ದಾರೆ.

ಜೆಡಿಎಸ್ ಕಾರ್ಯಕರ್ತರನ್ನು ಮುಗಿಸುತ್ತೇನೆ, ದಮನ ಮಾಡುತ್ತೇನೆ ಎನ್ನುವುದು ಅಹಂಕಾರ. ನಮ್ಮ ಕಾರ್ಯಕರ್ತರನ್ನು ರಕ್ಷಣೆ ಮಾಡಿಕೊಳ್ಳುವುದು ನಮಗೆ ಗೊತ್ತಿದೆ. ನಾನು ನ್ಯಾಯದಲ್ಲಿ ನಂಬಿಕೆ ಇರಿಸಿದ್ದೇನೆ. ಚನ್ನಪಟ್ಟಣ ಹಾಗೂ ರಾಜ್ಯದ ಜನತೆಯ ಪರವಾಗಿ ಸದಾ ಇರುತ್ತೇನೆ. ಅವರಿಗಾಗಿ ದುಡಿಯುತ್ತೇನೆ. ಹೆದರಿಸಿ, ಬೆದರಿಸುವ ರಾಜಕೀಯಕ್ಕೆ ಬಗ್ಗಲ್ಲ ಎಂದು ಸವಾಲು ಹಾಕಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಇಂಥ ಗೊಡ್ಡು ಬೆದರಿಕೆಗಳಿಗೆ ಜಗ್ಗುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನಿದ್ದೇನೆ, ಇಡೀ ಪಕ್ಷವಿದೆ. ಒಟ್ಟಾಗಿ ಹೋರಾಟ ಮಾಡೋಣ. ಸೋತಿದ್ದೇವೆಯೇ ಹೊರತು ಸತ್ತಿಲ್ಲ ಎಂದು ನಿಖಿಲ್ ಆಕ್ರೋಶ ಹೊರ ಹಾಕಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net