ಚನ್ನಮ್ಮ ಜಯಂತಿ ಅದ್ದೂರಿ ಆಚರಣೆ

18ydg04
Published on

ಯಾದಗಿರಿ: ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಜಿಲ್ಲಾಡಳಿತದಿಂದ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅ.27ರಂದು ಬೆಳಗ್ಗೆ 11 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ವೇದಿಕೆ ಸಿದ್ದತೆ,ಗಣ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಶಿಷ್ಠಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಜಯಂತಿಗೆ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು ಮತ್ತು ಎಲ್ಲ ತಾಲೂಕು ಮಟ್ಟದಲ್ಲಿ ಶಾಲಾ-ಕಾಲೇಜು, ವಿವಿಧ ಕಚೇರಿಗಳಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net