

ಮೈಸೂರು: ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಕಿತ್ತೂರು ರಾಣಿ ಚನ್ನಮ್ಮ ಅವರ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೆಮ ಎಲ್ಲರಿಗೂ ಅನುಕರಣೀಯ ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ ಬಣ್ಣಿಸಿದರು.
ವೀರ ರಾಣಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಅಂಗವಾಗಿ ಯುವ ಭಾರತ್ ಸಂಘಟನೆಯಿಂದ ನಗರದ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ನಮ್ಮ ನಾಡು ಅನ್ಯರ ಪಾಲಾಗದೆ ನಮಗೇ ಉಳಿಯಬೇಕೆಂಬ ಗುರಿ ಇಟ್ಟುಕೊಂಡು ಹೋರಾಟ ನಡೆಸಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಅವರ ಬದುಕು, ಹೋರಾಟ ಅನನ್ಯ. ಅವರ ದೇಶಪ್ರೆಮ ಎಲ್ಲರಿಗೂ ಅನುಕರಣೀಯವಾಗಿದ್ದು, ಪ್ರತಿ ಮನೆಯಲ್ಲೂ ರಾಣಿ ಚೆನ್ನಮ್ಮನಂತಹ ದಿಟ್ಟ ಮಹಿಳೆ ಹುಟ್ಟಿಬರಬೇಕೆಂಬ ಆಶಯ ವ್ಯಕ್ತಪಡಿಸಿದರು.
ಮಹಿಳೆ ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ ಎನ್ನುವುದನ್ನು ಈಗಾಗಲೇ ಸಾಧಿಸಿ ತೋರಿಸಿದ್ದಾಳೆ. ಆಕೆ ಮನಸ್ಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಹಲವು ಕ್ಷೇತ್ರಗಳಲ್ಲಿ ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುವ ಮೂಲಕ ಸೈ ಎನಿಸಿಕೊಂಡಿದ್ದಾಳೆ. ಇದು ಒಳ್ಳೆಯ ಬೆಳವಣಿಗೆ. ಎಲ್ಲರಿಗೂ ಸಮಾನ ಹಕ್ಕುಗಳಿದ್ದು, ಮಹಿಳೆಯರುನ್ನು ಅದನ್ನು ಪಡೆಯಬೇಕು ಎಂದರು.
ಹಿರಿಯ ಪತ್ರಕರ್ತ ಅನಿಲ್ಕುಮಾರ್ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ವೀರ ವನಿತೆ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿ ಇಂದು ಚರಿತ್ರೆಯ ಪುಟಗಳಲ್ಲಿ ಅಜಾರಾರಮರರಾಗಿದ್ದಾರೆ. ಇವರ ಸಾಧನೆ ಸ್ಮರಣೀಯ ಎಂದರು.
ನಗರಪಾಲಿಕೆ ನಾಮ ನಿರ್ದೇಶಿತ ಸದಸ್ಯರಾದ ಜಗದೀಶ್, ಕರ್ನಾಟಕ ಕ್ಷತ್ರಿಯ ಒಕ್ಕೂಟದ ಅಧ್ಯಕ್ಷ ಸವಿತಾ ಘಾಟ್ಕೆ, ಕೆ.ಆರ್.ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ಚಾಮರಾಜ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಚಿನ್, ಮುಖಂಡರಾದ ಎಸ್.ಎನ್.ರಾಜೇಶ್, ಸುರೇಶ್ ಗೋಲ್ಡ್, ಚರಣ್, ಮಹಾದೇವಪ್ರಸಾದ್, ವಿದ್ಯಾ, ಸ್ವಾತಿ, ಸದಾಶಿವ, ಫಣೀಶ್ ಇತರರು ಇದ್ದರು.
ಇದೇ ಸಂದರ್ಭದಲ್ಲಿ ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ ಅವರ ನಿಧನಕ್ಕೆ ಎರಡು ನಿಮಿಷ ಮೌನ ಆಚರಿಸಲಾಯಿತು.